ಪ್ರಜಾ ನಾಯಕ ಸುದ್ದಿ ಜಗಳೂರು :- ತಾಲೂಕಿನಲ್ಲಿ ಹಿಂದೂ – ಮುಸ್ಲಿಂ ಬಾಂಧವರು ಸಹೋದರರಂತೆ ಜೀವನ ನಡೆಸುತ್ತಿದ್ದೇವೆ ರಂಜಾನ್ ಹಬ್ಬವು ಮುಸ್ಲಿಂ ಸಮುದಾಯಕ್ಕೆ ಪವಿತ್ರ ಹಬ್ಬವಾಗಿದೆ ಎಂದು ಶಾಸಕ.ಬಿ ದೇವೇಂದ್ರಪ್ಪ ಹೇಳಿದರು.
ಗುರುವಾರ ಪಟ್ಟಣದ ರಂಜಾನ್ ಹಬ್ಬದ ಅಂಗವಾಗಿ ಈದ್ಗಾಮೈ ದಾನದಲ್ಲಿ ನಡೆದ ಪ್ರಾರ್ಥನೆಯಲ್ಲಿ ಭಾಗವಹಿಸಿ ನಂತರ ಮಾತ ನಾಡಿದ ಅವರು, ರಂಜಾನ್ ಹಬ್ಬವು ಮುಸ್ಲಿಂ ಸಮುದಾಯಕ್ಕೆ ಪವಿತ್ರ ಹಬ್ಬವಾಗಿದ್ದು ಉಳ್ಳವಾರು ಇಲ್ಲದವರಿಗೆ ನೀಡುವುದೆ ಹ ಬ್ಬದ ಸಂದೇಶವಾಗಿದೆ ಎಂದರು
ನಂತರ ಮಾತನಾಡಿ ಇಸ್ಲಾಮಿನ ನಾಲ್ಕನೆಯ ಕಡ್ಡಾಯ ಕರ್ಮ ರಂಜಾನ್ ತಿಂಗಳ ಸಂಪೂರ್ಣ ವ್ರತಾಚರಣೆ ಯಾಗಿದೆ.ಮಾನವ ಕಲ್ಯಾಣಕ್ಕಾಗಿ ಪ್ರವಾದಿ ಮುಹಮ್ಮದ್(ಸ)ರವರ ಮೇಲೆ ಇದೇ ತಿಂಗಳಲ್ಲಿ ಪವಿತ್ರ ಕುರ್ಆನ್ ಅವತೀರ್ಣಗೊಂಡಿತು.ಇದರ ಗೌರ ವಾರ್ಹ ಪ್ರತಿವರ್ಷವೂ ಈ ಒಂದು ತಿಂಗಳ ವ್ರತಾಚರಣೆಯ ನ್ನು ಕಡ್ಡಾಯ ಗೊಳಿಸಲಾಯಿತು.ಪ್ರಭಾತಕಾಲ ದಿಂದ ಹಿಡಿದು ಸೂರ್ಯಾಸ್ತಮದವರೆಗೆ ಇತರ ಸಮಯಗಳಲ್ಲಿ ಧರ್ಮಸಮ್ಮತ ವಾದ ಅನ್ನ ಪಾನೀಯಗಳನ್ನು ಮತ್ತು ಕೆಟ್ಟ ಸಕ್ತಿಯ ಚಟುವಟಿಕೆಗ ಳನ್ನು ತ್ಯಜಿಸುವುದನ್ನೇ ಇಸ್ಲಾಮಿನಲ್ಲಿ ಉಪವಾಸ ಅಥವಾ ವ್ರತಾಚ ರಣೆ ಎನ್ನಲಾಗಿದೆ.ಸ್ವೇಚ್ಛೆ, ಸ್ವಾರ್ಥ ಮತ್ತು ಅತ್ಯಾಗ್ರಹಗಳಂಥ ಎಲ್ಲ ವಿಧ ಮಾನವೀಯ ದೌರ್ಬಲ್ಯ ಗಳಿಂದ ಮನುಷ್ಯನನ್ನು ಮುಕ್ತಗೊ ಳಿಸಿ ದೇಹ ಮತ್ತು ಆತ್ಮವನ್ನು ಪವಿತ್ರ ಗೊಳಿ ಸುವುದೇ ಒಂದು ತಿಂಗಳ ಪೂರ್ಣ ವ್ರತಾಚರ ಣೆಯ ಉದ್ದೇಶವಾಗಿದೆ.
ರಂಜಾನ್ ಉಪವಾಸ ಆಚರಣೆ ಏಕೆ?
ರಂಜಾನ್ ಆಚರಣೆಗೂ ಮುನ್ನ ಈ ಮಾಸದಲ್ಲಿ ಮುಸ್ಲಿಮರು 30 ದಿನ ಉಪವಾಸ ಆಚರಿಸುವ ಜೊತೆಗೆ ದಾನ-ಧರ್ಮ,ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುತ್ತಾರೆ.ಇಸ್ಲಾಮಿನ ಉಪ ವಾಸ, ಝಕಾ ತ್ (ದಾನ),ಹಜ್ ಎಂಬ ಪಂಚಕರ್ಮಗಳನ್ನು ನೇರವೇರಿಸುವ ರಂಜಾನ್ ಪುಣ್ಯ ಸಂಪಾದಿಸುವ ಮಾಸವೂ ಎನಿಸಿಕೊಂಡಿದೆ.
ಈ ಸಮಯದಲ್ಲಿ ಆತ್ಮನಿಯಂತ್ರಣದ ಜತೆಗೆ ಸಂಯಮ ರೂಢಿಸಿ ಕೊಳ್ಳುವುದನ್ನು ಕಲಿಯುತ್ತಾರೆ. ಬಡವರ ಹಸಿವು ಅರಿಯುವ ಜೊ ತೆಗೆ ಒಂದು ಹೊತ್ತಿನ ಊಟಕ್ಕೆ ಕಷ್ಟಪಡುವವರ ಜೀವನ ಹೇಗಿರ ಬಹುದು? ಎಂಬ ಪಾಠವನ್ನೂ ಉಪವಾಸ ಕಲಿಸುತ್ತದೆ. ಅಲ್ಲದೆ ರಾತ್ರಿ ವೇಳೆ ನಡೆಯುವ ವಿಶೇಷ ತರಾವೀಹ್ ನಮಾಜ್ಗಳಲ್ಲಿ ಪವಿ ತ್ರ ಕುರಾನ್ ಪಠಿಸಲಾಗುತ್ತದೆ. ಕುರಾನ್ನನ್ನು ಸಂಪೂರ್ಣ ವಾಗಿ ಬಾಯಿಪಾಠ ಮಾಡಿರುವವರು ಈ ನಮಾಜ್ಗೆ ನೇತೃತ್ವ ವಹಿಸು ತ್ತಾರೆ. ಮನುಷ್ಯನನ್ನು ಅನ್ಯಚಿತ್ತದೆಡೆಗೆ ಕೊಂಡೊಯ್ಯುವ ಮಾರ್ಗ ವನ್ನು ಮುಚ್ಚಿ,ಒಳಿತಿನ ಬಗ್ಗೆ ಮಾತ್ರ ಚಿಂತಿಸುವಂತೆ ಮಾಡು ವುದು ರಂಜಾನ್ ಮಾಸದ ವಿಶೇಷ. ಹಾಗಾಗಿಯೇ ಈ ಮಾಸದಲ್ಲಿ ಅಲ್ಲಾ ನ ಪ್ರೀತಿಗಳಿಸುವ ಇಚ್ಛೆಯೊಂದಿಗೆ ಆಹಾರ,ಮದ್ಯ ಸೇವನೆ ಯ ನ್ನೂ ತ್ಯಜಿಸುತ್ತಾರೆ.ಕಾಮಾಸಕ್ತಿ,ಮನರಂಜನೆಯಿಂದ ದೂರವಿ ದ್ದು, ದುಡಿಮೆ ನಂಬಿ ಬದುಕುತ್ತಾರೆ.
ಈ ಮಾಹೆಯಲ್ಲಿ ದಾನ-ಧರ್ಮಕ್ಕೆ ಹೆಚ್ಚಿನ ಮಹತ್ವ ನೀಡಲಾಗುತ್ತದೆ. ದಾನ ಮಾಡುವುದರಿಂದ ಹೆಚ್ಚಿನ ಪುಣ್ಯ ಲಭಿಸುತ್ತದೆ. ಶ್ರೀಮಂತ ರು ಮತ್ತು ಉಳ್ಳವರು ತಮ್ಮ ಸಂಪತ್ತಿನ ಶೇ 2.5 ಪಾಲನ್ನು ಝಕಾತ್ (ದಾನ) ರೂಪದಲ್ಲಿ ಬಡವರಿಗೆ ನೀಡುವುದನ್ನು ಇಸ್ಲಾಂ ಕಡ್ಡಾಯ ಗೊಳಿಸಿದೆ ಎಂದರು .
ಇದೇ ವೇಳೆ ಜಗಳೂರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮುಸ್ಲಿಂ ಸಮಾಜದ ಹಿರಿಯರು ಮುಖಂಡರು ಮತ್ತು ಹಿರಿಯರು ಶಾಂತಿ ಯುತವಾಗಿ ಸ್ಲೋಗನ್ ಗಳನ್ನು ಕೂಗುವ ಮೂಲಕ ಧಾರ್ಮಿಕ ಮೆರವಣಿಗೆ ಮಾಡಿ ಈದ್ಗಾ ಮೈದಾನ ತಲುಪಿದರು
ಈ ಸಂದರ್ಭದಲ್ಲಿ ಕೆಪಿಸಿಸಿ ಎಸ್ಟಿ ಘಟಕದ ರಾಜ್ಯಾಧ್ಯಕ್ಷ ಕೆ.ಪಿ.ಪಾಲ ಯ್ಯ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಶೀರ್ , ಕೆಪಿಸಿಸಿ ಸದಸ್ಯ ಕಲ್ಲೇಶ್ ರಾಜ್ ಪಾಟೀಲ್.ನಿವೃತ್ತ ಸಮಾಜ ಕಲ್ಯಾಣ ಅಧಿಕಾರಿ ಹಾಗೂ ಎಸ್ಸಿ ಘಟಕದ ತಾಲೂಕು ಅಧ್ಯಕ್ಷ ಬಿ ಮಹೇಶ್ವರಪ್ಪ. ಪಟ್ಟಣ ಪಂಚಾಯ ತಿ ಸದಸ್ಯರಾದ ಶಕೀಲ್, ಮಹಮ್ಮದ್ ಆಲಿ.ಲುಕ್ಮಾನ್.ಇಕ್ಬಲ್ ಅಹ ಮದ್.ಕಲಂದರ್ ಸಾಬ್,ಅನ್ವರ್ ಸಾಬ್.ಶಂಶುದ್ದೀನ್. ಇಮಾಮ್ ಅಲಿ.ಅಕ್ತರ್ ಸಾಬ್. ಮಹಮ್ಮದ್ ಗೌಸ್.ಹಟ್ಟಿ ತಿಪ್ಪೇಸ್ವಾಮಿ ಸೇರಿ ದಂತೆ ನೂರಾರು ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿಲು ಭಾಗವಹಿಸಿ ಹಾಜರಿದ್ದರು.