ದಾವಣಗೆರೆ ಜಿಲ್ಲೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ರಾಜ್ಯ ಬಜೆಟ್ನಲ್ಲಿ ದಾವಣಗೆರೆ ಜಿಲ್ಲೆಗೆ ಸಾಕಷ್ಟು ನಿರೀಕ್ಷೆಗಳಿದ್ದರೂ, ಎಲ್ಲ ನಿರೀಕ್ಷೆ ತಲುಪಲು ಸಾಧ್ಯವಾಗಿಲ್ಲ. ಆದರೆ, ವಿಮಾನ ನಿಲ್ದಾಣ ಸ್ಥಾಪನೆ, ವಿಶ್ವಕನ್ನಡ ಸಾಹಿತ್ಯ ಸಮ್ಮೇಳ, ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ, ಆರು ಪಥದ ಹೆದ್ದಾರಿ ಅಭಿವೃದ್ಧಿ…ಹೀಗೆ ಜಿಲ್ಲೆಗೆ ಅನೇಕ ಕಾರ್ಯಕ್ರಮಗಳನ್ನು ಘೋಷಣೆ ಮಾಡಿದ್ದಾರೆ.
👉ದಾವಣಗೆರೆ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗೆ ವರದಿಯನ್ನು ಸಿದ್ದಪಡಿಸಲಾಗಿದೆ. ಈ ವರ್ಷದಲ್ಲಿ ದಾವಣಗೆರೆ ವಿಮಾನ ನಿಲ್ದಾಣ ಕಾಮಗಾರಿ ಆರಂಭಿಸುವುದಾಗಿ ಬಜೆಟ್ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಕಟಿಸಿದ್ದಾರೆ. ಮೂರನೇ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನವನ್ನು ದಾವಣಗೆರೆಯಲ್ಲಿ ಆಯೋಜಿಸಲು ನಿರ್ಮಾನಿಸಲಾಗಿದೆ.
👉2,611 ರೂ. ಕೋಟಿ ವೆಚ್ಚದಲ್ಲಿ ಚಿತ್ರದುರ್ಗ-ದಾವಣಗೆರೆ -ಹಾವೇರಿ ಮಾರ್ಗದ ಆರು ಪಥದ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿ ತೀವ್ರಗೊಳಿಸಲಾಗುವುದು.
👉ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿರುವ ಸಂತ ಸೇವಾಲಾಲ್ರವರ ಜನ್ಮಸ್ಥಳವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲು 5 ಕೋಟಿ
👉ಚನ್ನಗಿರಿ ತಾಲೂಕಿನ ಹೊದಿಗೆರೆಯಲ್ಲಿರುವ ಶಿವಾಜಿ ಮಹಾರಾಜ್ ಸಮಾಧಿ ಸ್ಥಳದ ಅಭಿವೃದ್ಧಿಗೆ 5 ಕೋಟಿ
ದಾವಣಗೆರೆ ನಗರದಲ್ಲಿ ಹೊಸ ಎಸ್.ಡಿ.ಆರ್.ಎಫ್ ಕಂಪನಿ ಮಂಜೂರು
👉ಕೇಂದ್ರ ಸರ್ಕಾರವು 2023-24ನೇ ಸಾಲಿನ ಆಯವ್ಯಯದಲ್ಲಿ ಚಿಕ್ಕಮಂಗಳೂರು, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಯೋಜನೆ ಮಾನ್ಯತೆ ದೊರೆತಿದೆ.ಇದಕ್ಕೆ ಕೇಂದ್ರ ಸರ್ಕಾರವು 5,300 ಕೋಟಿ ರೂ. ಸಹಾಯಧನ ಘೋಷಣೆ ಮಾಡಿದೆ. ಈ ಯೋಜನೆಯನ್ನು ಅನುಷ್ಠಾನಕ್ಕೆ ರಾಜ್ಯ ಬಜೆಟ್ನಲ್ಲಿ ಪ್ರಸ್ತಾಪ ಮಾಡಲಾಗಿದೆ.