ಪ್ರಜಾ ನಾಯಕ ದಾವಣಗೆರೆ:-ಜಿಲ್ಲೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್ ಗ್ರೇಡ್-1 ಹುದ್ದೆಗಳುಹಾಗೂ ವಿವಿಧ ಗ್ರೂಪ್ ಎ, ಬಿ ಮತ್ತು ಸಿ ವೃಂದದ ನೇಮಕಾತಿಗಾಗಿ ಫೆ.25ರಂದು ನಗರದ 15ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಫೆ. 26ರಂದು 4 ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಶಿವಾನಂದ ಕಪಾಶಿ ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರಗಳು ನಡೆಯದಂತೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ವ್ಯಾಪ್ತಿ ಪ್ರದೇಶವನ್ನು ಸಾರ್ವಜನಿಕ ಪ್ರವೇಶಕ್ಕೆ ನಿಷೇಧವೆಂದು ಮತ್ತು ಜೆರಾಕ್ಸ್ ಆ೦ಗಡಿಗಳ ಪರೀಕ್ಷಾ ಅವಧಿಯಲ್ಲಿ ಮುಚ್ಚಲು ಆದೇಶಿಸಿದ್ದಾರೆ.
0 Today: 4