ಪ್ರಜಾ ನಾಯಕ ಸುದ್ದಿ ದಾವಣಗೆರೆ-: ಜಿಲ್ಲೆಯಲ್ಲಿ ಇಂದಿನಿಂದ ಏಪ್ರಿಲ್ 15 ರವರೆಗೆ ನಡೆಯುವ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಆದೇಶ ಹೊರಡಿಸಿದ್ದಾರೆ.
ದಾವಣಗೆರೆ ಜಿಲ್ಲಾ ವ್ಯಾಪ್ತಿಯ 89 ಪರೀಕ್ಷಾ ಕೇಂದ್ರಗಳಲ್ಲಿ ನಡೆಯ ಲಿರುವ ಎಸ್ಎಸ್ಎಲ್ಸಿ ಪರೀಕ್ಷೆ ಯನ್ನು ಪಾರದರ್ಶಕವಾಗಿ ನಡೆಸುವ ಹಿನ್ನಲೆಯಲ್ಲಿ ಪರೀಕ್ಷಾ ದಿನಗಳಂದು ಎಲ್ಲ ಪರೀಕ್ಷಾ ಅವಧಿಯಲ್ಲಿ ಮುಚ್ಚಲು ಮತ್ತು ಕೇಂದ್ರಗಳ ಸುತ್ತ 200 ಮೀಟರ್ ಪರಿಮಿತಿ ವ್ಯಾಪ್ತಿ ಪ್ರದೇಶವನ್ನು ಸಾರ್ವಜನಿಕ ಪ್ರವೇಶಕ್ಕೆ ನಿಷೇಧಿತ ಪ್ರದೇಶವೆಂದು ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿರುವ ಜೇರಾಕ್ಸ್ ಅಂಗಡಿಗಳು, ಸೈಬರ್ಕೆಫೆ ಮತ್ತು ಕಂಪ್ಯೂಟರ್ ಅಂಗಡಿಗಳನ್ನು ಪರೀಕ್ಷಾ ಆದೇಶ ಹೊರಡಿಸಿದ್ದಾರೆ.
ಆದೇಶವು ಪರೀಕ್ಷಾರ್ಥಿಗಳಿಗೆ ಹಾಗೂ ಪರೀಕ್ಷೆಯ ಕರ್ತವ್ಯ ನಿರ್ವಹಿ ಸಲು ನೇಮಕಾತಿ ಆದ ಅಧಿಕಾರಿಗಳು ಮತ್ತು ಸಿಬ್ಬಂದಿ ಗಳಿಗೆ ಅನ್ವಯಿಸುವುದಿಲ್ಲ, ಪರೀಕ್ಷಾರ್ಥಿಗಳನ್ನು ಪರೀಕ್ಷಾ ಕೇಂದ್ರ ಗಳಿಗೆ ಬಿಡಲು ಬರುವ ಪೋಷಕರು ಯಾವುದೇ ಕಾರಣಕ್ಕೂ ಪರೀಕ್ಷಾ ಕೇಂದ್ರದ ಬಳಿ ಗುಂಪುಗೂಡುವುದು, ನಿಲ್ಲುವುದು ಮತ್ತು ವಾಹನ ಗಳನ್ನು ಪಾರ್ಕಿಂಗ್ ಮಾಡುವು ದನ್ನು ಸಂಪೂರ್ಣವಾಗಿ ನಿಷೇಧಿಸಿದೆ ಎಂದು ತಿಳಿಸಿದ್ದಾರೆ