ಪ್ರಜಾ ನಾಯಕ ಸುದ್ದಿ ಜಗಳೂರು:-ಎರಡು ಪ್ರತ್ಯೇಕ ಘಟನೆಗಳಲ್ಲಿ ತಾಲ್ಲೂಕಿನಲ್ಲಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.
ಮದ್ಯವ್ಯಸನಿಯಾಗಿದ್ದ ಪಟ್ಟಣದ ಜೆ.ಡಿ. ಬಡಾವಣೆಯ ಶಶಿಧರ್ (50)ಎಂಬುವವರು ಮಂಗಳವಾರ ನೇಣು ಹಾಕಿಕೊಂಡು ಆತ್ಮತ್ಯೆಗೆ ಶರಣಾಗಿದ್ದಾರೆ. ಮೃತರ ಪತ್ನಿ ಇಲ್ಲಿನ ಖಾಸಗಿ ಕಾಲೇಜಿನಲ್ಲಿ ಅರೆಕಾಲಿಕ ಉಪನ್ಯಾಸಕಿಯಾಗಿದ್ದಾರೆ. ಮೃತನಿಗೆ ಒಬ್ಬ ಪುತ್ರ ಇದ್ದಾನೆ.
ತಾಲ್ಲೂಕಿನ ಕೆಚ್ಚೇನಹಳ್ಳಿ ಗ್ರಾಮದಲ್ಲಿ ನಾಲ್ಕು ದಿನದ ಹಿಂದೆ ವಿಷ ಸೇವನೆ ಮಾಡಿದ್ದ ರಾಜಪ್ಪ (40) ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಸಾವನ್ನಪ್ಪಿದ್ದಾರೆ. ವಿಷ ಸೇವಿಸಿ ಅಸ್ವಸ್ಥರಾಗಿದ್ದ ರಾಜಪ್ಪ ಅವರನ್ನು ದಾವಣಗೆರೆಯ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.
ಎರಡೂ ಘಟನೆಗಳಿಗೆ ಸಂಬಂಧಿಸಿದಂತೆ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ
0 Today: 8