ಪ್ರಜಾ ನಾಯಕ ಸುದ್ದಿ ಜಗಳೂರು :- ರಾಜ್ಯ ಸರ್ಕಾರ ಕೃಷಿ ಉತ್ಪ ನ್ನ ಗಳಿಗೆ ಬೆಂಬಲ ಬೆಲೆ ಕಾನೂನು ಜಾರಿ ಮಾಡುವ ಮೂಲಕ ರಾಜ್ಯ ದ ರೈತರ ರಕ್ಷಣೆಗೆ ಧಾವಿಸಬೇಕೆಂದು ರಾಜ್ಯ ರೈತ ಸಂಘ, ಹಸಿರು ಸೇನೆ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್ ಒತ್ತಾಯಿಸಿದರು.
ಜಗಳೂರು ತಾಲ್ಲೂಕಿನ ಚಿಕ್ಕಬನ್ನಿಹಟ್ಟಿಯಲ್ಲಿಂದು ರಾಜ್ಯ ರೈತ ಸಂಘ, ಹಸಿರುಸೇನೆ ಗ್ರಾಮ ಘಟಕ ನಾಮಫಲಕ ಅನಾವರಣ ಮತ್ತು ಬಹಿರಂಗ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿ ದರು.
ಈ ಹಿಂದೆ ಕೃಷಿ ಬೆಳೆಗಳಿಗೆ ಬೆಂಬಲ ಬೆಲೆ ನಿಗದಿಪಡಿಸುವ ಪ್ರತ್ಯೇಕ ಕಾಯಿದೆ ಜಾರಿ ಮಾಡುವಂತೆ ಸಂಘದಿಂದ ವರ್ಷಗಟ್ಟಲೇ ಹೋರಾಟ ಮಾಡಿದರೂ ಕೇಂದ್ರ ಸರ್ಕಾರ ಕಿವಿಗೊಡಲಿಲ್ಲ. ಇದೇ ಕಾರಣದಿಂದ ರೈತೋತ್ಪನ್ನಗಳಿಗೆ ಸರಿಯಾದ ಬೆಲೆ ಸಿಗದೇ ರೈತರು ಸಾಯುವ ಸ್ಥಿತಿ ಇದೆ. ಅಂದು ಕೇಂದ್ರದ ವಿರುದ್ಧ ರೈತರು ಹೋರಾ ಟ ಮಾಡಬೇಕಾದರೆ ಸಿದ್ದರಾಮಯ್ಯ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಈ ಹೋರಾಟ ಬೆಂಬಲಿಸಿ ಕನಿಷ್ಟ ಬೆಂಬಲ ಬೆಲೆಗೆ ಕಾನೂನು ಜಾರಿಯಾಗಲೇಬೇಕೆಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದರು. ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮಟ್ಟಕ್ಕಾದರೂ ಕನಿಷ್ಟ ಬೆಂಬಲ ಬೆಲೆ ಕಾನೂನು ಜಾರಿ ಮಾಡುವ ಮೂಲಕ ರೈತರ ರಕ್ಷಣೆಗೆ ಬರಬೇಕೆಂದು ಒತ್ತಾಯಿಸಿದರು.
ಜಗಳೂರು ತಾಲ್ಲೂಕು ಶಾಶ್ವತ ಬರ ಪೀಡಿತ ಎನ್ನುವ ಹಣೆಪಟ್ಟಿ ಹಚ್ಚಿಕೊಂಡು ಶತಮಾನಗಳೇ ಕಳೆದಿವೆ. ಇಲ್ಲಿನ ಬೆಸ್ಕಾಂ ಅಧಿಕಾರಿ ಗಳು ರೈತರ ಪಂಪ್ಸೆಟ್ಗಳ ವಿದ್ಯುತ್ ಪರಿವರ್ತಕಗಳು ಸುಟ್ಟಾಗ ಲಂಚ ಕೊಟ್ಟರೆ ಮಾತ್ರ ಅವುಗಳನ್ನು ಬದಲಾಯಿಸುತ್ತಾರೆ. ಇಂಥ ಹ ಪರಿಸ್ಥಿತಿಯಲ್ಲಿ ಬೆಳೆಗಳು ಹಾಳಾಗುತ್ತಿವೆ. ಬೆಸ್ಕಾಂ ಅಧಿಕಾರಿಗಳು ಇನ್ನು ಮುಂದೆ ಟಿಸಿ ಸುಟ್ಟ ತಕ್ಷಣ ಹೊಸ ಟಿಸಿ ಕೊಡಬೇಕು ಎಂದು ಆಗ್ರಹಿಸಿದರು.
ಕೊಂಡು ಕುರಿ ಅಭಯಾರಣ್ಯ ಅಕ್ಕಪಕ್ಕದಲ್ಲಿ ವ್ಯವಸಾಯ ಮಾಡು ವ ರೈತರಿಗೆ ರಾತ್ರಿ ವೇಳೆಯಲ್ಲಿ ವಿದ್ಯುತ್ ನೀಡುವುದರಿಂದ ಚಿರತೆ, ಕರಡಿ ಇತರೆ ಕಾಡು ಪ್ರಾಣಿಗಳ ದಾಳಿಗೆ ಹೆದರಿ ವ್ಯವಸಾಯವನ್ನೇ ಬಿಡುವ ಸ್ಥಿತಿ ಇದೆ. ಈ ಕಾರಣದಿಂದ ಕೊಂಡು ಕುರಿ ಸುತ್ತ ಮುತ್ತಲ ಗ್ರಾಮಗಳ ರೈತರಿಗೆ ಹಗಲು ವೇಳೆಯಲ್ಲಿಯೇ ಕನಿಷ್ಟ 5 ಗಂಟೆಗಳ ಕಾಲ ಗುಣಮಟ್ಟದ ವಿದ್ಯುತ್ ನೀಡಬೇಕೆಂದು ಮಂಜುನಾಥ್ ಒತ್ತಾಯಿಸಿದರು.
ಜಿಲ್ಲಾ ಮುಖಂಡ ಕಾನನ ಕಟ್ಟೆ ತಿಪ್ಪೇಸ್ವಾಮಿ ಮಾತನಾಡಿ, ಈಗಾಗ ಲೇ ಮುಂಗಾರು ಮಳೆ ವಿಳಂಬದಿಂದ ರೈತರು ಆತಂಕದಲ್ಲಿದ್ದಾರೆ. ಜಿಲ್ಲಾಡಳಿತ ಕೂಡಲೇ ಜನರು ಗುಳೆ ಹೋಗುವುದನ್ನ ತಡೆದು ಅವರಿಗೆ ಉದ್ಯೋಗ ಒದಗಿಸುವ ಕೆಲಸ ಮಾಡಬೇಕು, ಆತಂಕದ ಲ್ಲಿರುವ ರೈತರಿಗೆ ಭರವಸೆ ನೀಡಬೇಕೆಂದು ಒತ್ತಾಯಿಸಿದರು.
ಜಿಲ್ಲಾ ಪ್ರಧಾನಕಾರ್ಯದರ್ಶಿ ಚಿರಂಜೀವಿ ಮಾತನಾಡಿ, ರೈತರು ಒಗ್ಗಟ್ಟಾದರೆ ಸರ್ಕಾರವೇ ನಮ್ಮ ಮನೆಯ ಬಾಗಿಲಿಗೆ ಬರುತ್ತದೆ. ಜಗಳೂರು ತಾಲೂಕಿನಲ್ಲಿ ಕಳಪೆ, ಬೀಜ, ರಸಗೊಬ್ಬರ, ಕೀಟನಾಶ ಕಗಳು ಮಾರಾಟ ಮಾಡುವುದು ಕಂಡು ಬಂದರೆ ಅಂಥವರ ವಿರುದ್ಧ ಹೋರಾಟ ಮಾಡಿ ಅವರನ್ನು ಜೈಲಿಗೆ ಕಳುಹಿಸುವವರೆಗೂ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ದಿಬ್ಬದಹಳ್ಳಿ ಗಂಗಾಧರಪ್ಪ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿಕ್ಕಬನ್ನಿಹಟ್ಟಿ ವೀರೇಶ್. ಕುಮಾರ್ ರಾಜನಟ್ಟಿ. ವಹಿಸಿದ್ದರು.
ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ಮಹೇಶ, ಪರಮೇಶ್, ಚಂದ್ರಶೇಖರ ಉಪಸ್ಥಿತರಿದ್ದರು. ಸುತ್ತ ಮುತ್ತ ಗ್ರಾಮಗಳ ನೂರಾ ರು ರೈತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.