ಪ್ರಜಾ ನಾಯಕ ಸುದ್ದಿ ದಾವಣಗೆರೆ: ಜಿಲ್ಲಾದ್ಯಂತ ಶೇ.40 ವಾಡಿಕೆ ಗಿಂತ ಕಡಿಮೆ ಮಳೆಯಾಗಿದ್ದು, ರೈತರು ಪರ್ಯಾಯ ಬೆಳೆ ಬೆಳೆ ಯಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ರೈತರಿಗೆ ಸಲಹೆ ನೀಡಿದರು.
ಜಿಲ್ಲೆಯಲ್ಲಿ ಜೂನ್ ಅಂತ್ಯದ ವೇಳೆಗೆ 173 ಮಿ.ಮೀವಾಡಿಕೆಯ ಮಳೆಯಾಗಬೇಕಿತ್ತು. ಆದರೆ 105 ಮಿ.ಮೀ ಮಾತ್ರ ಮಳೆಯಾಗಿದೆ. ಇದರಿಂದ ನಿರೀಕ್ಷಿತ ಮಟ್ಟದಲ್ಲಿ ಜಮೀನಿನಲ್ಲಿ ಬಿತ್ತನೆ ಕಾರ್ಯ ವಿಳಂಬವಾಗಿದೆ. ಆದ್ದರಿಂದ ಶಿವಮೊಗ್ಗ ಸಂಶೋಧನಾ ಸಂಸ್ಥೆ ತಜ್ಞರೊಂದಿಗೆ ಸಭೆ ನಡೆಸಿ ಪರ್ಯಾಯ ಬೆಳೆ ಬಗ್ಗೆ ರೈತರಿಗೆ ತಿಳಿಸಲಾಗುವುದು ಎಂದರು.
ರಸಗೊಬ್ಬರ, ಬಿತ್ತನೆ ಬೀಜ ಕೊರತೆ ಇಲ್ಲ.ಜಿಲ್ಲೆಯಲ್ಲಿ 29,400 ಮೆಟ್ರಿಕ್ ಟನ್ ರಸಗೊಬ್ಬರದ ಅವಶ್ಯಕವಿದ್ದು, 40,000 ಮೆಟ್ರಿಕ್ ಟನ್ ಸಂಗ್ರಹವಿದೆ. 41,000 ಕ್ವಿಂಟಾಲ್ ಬಿತ್ತನೆ ಬೀಜ ಬೇಡಿಕೆ ಯಷ್ಟು ಶೇಖರಣೆಯಿದೆ. ರಸಗೊಬ್ಬರ ಹಾಗೂ ಬಿತ್ತನೆ ಬೀಜದ ಯಾವುದೇ ಕೊರತೆಯಿಲ್ಲ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಮಾಹಿತಿ ನೀಡಿದರು.
0 Today: 5