ಪ್ರಜಾ ನಾಯಕ ಸುದ್ದಿ ಜಗಳೂರು :-ತಾಲೂಕನ್ನು ಶಾಶ್ವತ ಬರ ಪೀಡಿತ ಪ್ರದೇಶ ಎಂದು ಘೋಷಿಸಲು ಹಾಗೂ ರೈತ ಕೃಷಿಕಾರ್ಮಿಕ ರಿಗೆ ಉದ್ಯೋಗ ನೀಡಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಪ್ರತಿಭಟನೆ ನಡೆಸ ಲಾಯಿತು.
ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಾಕಾರರು ಸರಕಾರದ ವಿರುದ್ದ ಘೋಷಣೆ ಕೂಗುತ್ತಾ ಮಹಾತ್ಮಗಾಂಧಿ ವೃತ್ತದ ಮೂಲಕ,ಅಂಬೇಡ್ಕರ್ ವೃತ್ತದಿಂದ ತಾಲೂಕು ಕಛೇರಿ ಮುಂಬಾಗ ಜಮಾಯಿಸಿ ಉಪ ತಹಶೀಲ್ದಾರ್ ರೂಪ ಇವರಿಗೆ ಲಿಖಿತ ಮನವಿ ಸಲ್ಲಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿರಂಜೀವಿ ಮಾತನಾಡಿ,ಪ್ರಸಕ್ತ ಸಾಲಿನಲ್ಲಿ ಸರಿಯಾಗಿ ಮಳೆ ಬಾರದೆ ಮುಖ್ಯ ಬೆಳೆಗಳಾದ ಮೆಕ್ಕೆಜೋಳ,ಶೇಂಗಾ,ಸೂರ್ಯಕಾಂತಿ,ರಾಗಿ,ಈರುಳ್ಳಿ,ತರಕಾರಿ ಬೆಳೆಗಳು ಒಣಗುತ್ತಿವೆ.ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿ ರೈತರು ಕಂಗಾಲಾಗಿದ್ದಾರೆ.ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು.ರೈತಕೃಷಿ ಕಾರ್ಮಿಕರು ಗುಳೆ ಹೋಗುವುದನ್ನು ತಪ್ಪಿಸುವ ಸಲುವಾಗಿ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿ ದರು.
ಜಿಲ್ಲಾ ಕಾರ್ಯದರ್ಶಿ ಸತೀಶ್ ಮಾತನಾಡಿ ತಾಲೂಕಿನಲ್ಲಿ ಅಧಿ ಕಾರಿಗಳು ಬೆಳೆ ಸಮೀಕ್ಷೆ ವರದಿ ಸಲ್ಲಿಸಬೇಕು.ಅಲ್ಪ ಸ್ವಲ್ಪ ಕೊಳವೆ ಬಾವಿಗಳಿಂದ ನೀರು ಹಾಯಿಸಲು ಗುಣಮಟ್ಟದ ವಿದ್ಯುತ್ ಸರ ಬರಾಜು ಮಾಡದೆ ಬೆಸ್ಕಾಂ ಇಲಾಖೆಯು ಅಧಿಕಾರಿಗಳು ರೈತ ರೊಂದಿಗೆ ಕಣ್ಣಾಮುಚ್ಚಾಲೆ ಆಟ ಆಡುತ್ತಿದೆ.ಶೀಘ್ರ ಸಮಸ್ಯೆ ಬಗೆಹರಿ ಸದಿದ್ದರೆ ಉಗ್ರಸ್ವರೂಪದ ಹೊರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ದಿಬ್ಬದಹಳ್ಳಿ ಗಂಗಾಧರಪ್ಪ,ಜಿಲ್ಲಾ ಕಾರ್ಯದರ್ಶಿ ಗೌಡಗೊಂಡನಹಳ್ಳಿ ಸತೀಶ್,ಪದಾಧಿಕಾರಿಗಳಾದ ವಿರೇಶ್,ಪ್ರಹ್ಲಾದಪ್ಪ,ತಿಪ್ಪೇಸ್ವಾಮಿ,ಏಕಾಂತಪ್ಪ,ಸಹದೇವರೆಡ್ಡಿ,ತಿಪ್ಪೇಸ್ವಾಮಿ,ರಂಗಪ್ಪ,ಶರಣಮ್ಮ,ಸೇರಿದಂತೆ ರೈತ ಸಂಘಟನೆ ಮುಖಂಡ ರು ಭಾಗವಹಿಸಿದ್ದರು.