ಪ್ರಜಾ ನಾಯಕ ಸುದ್ದಿ ಜಗಳೂರು :- ಕೇಂದ್ರ ಬರ ಅಧ್ಯಯನ ತಂಡ ದೊಂದಿಗೆ ತಾಲೂಕಿನ ಹಿರೇಮಲ್ಲನಹೊಳೆ ಕೆರೆ ಹಾಗೂ ಶೇಂಗಾ ಬೆಳೆ ,ಭರಮಸಮುದ್ರ ಬಳಿ ಮೆಕ್ಕೆಜೋಳ,ಜಮೀನುಗಳಿಗೆ ಭೇಟಿ ನೀಡಿ,ಬೆಳೆ ವೀಕ್ಷಸಿ ಶಾಸಕ ಬಿ.ದೇವೇಂದ್ರಪ್ಪ ನಂತರ ಮಾತನಾಡಿ,
ರಾಜ್ಯದ 224 ಕ್ಷೇತ್ರಗಳಲ್ಲಿ ಜಗಳೂರು ತಾಲೂಕು ನಂಜುಂಡ ಪ್ಪ ವರದಿ ಪ್ರಕಾರ ಅತ್ಯಂತ ಹಿಂದುಳಿದ ತಾಲೂಕಾಗಿದೆ. ಸ್ವಾತಂತ್ರ್ಯ ನಂತರ ಕೇವಲ ನಾಲ್ಕು ವರ್ಷ ಮಾತ್ರ ಬೆಳೆ ಫಸಲು ಚೆನ್ನಾಗಿದೆ. ಸಾಗುವಳಿ ನಂತರ ಬೆಳೆಗಳ ಸಾಲಿನಲ್ಲಿ ಕನಿಷ್ಠ 30 ಮಿ.ಮೀ ಮಳೆ ಯಿಲ್ಲದೆ ಸಸಿಗಳು ಮಣ್ಣಿನ ಸಮತೋಲನವಾ ಗಿದೆ.ಮಣ್ಣು ಹೆಪ್ಪು ಗಟ್ಟಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಸರ್ಕಾರದ ಮಾರ್ಗಸೂಚಿಯನ್ವಯ ಜಿಲ್ಲೆಯ ಬರ ಪರಿಸ್ಥಿತಿಯ ವಾಸ್ತವ ಸ್ಥಿತಿಯ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಕೇಂದ್ರ ಬರ ಅಧ್ಯಯನ ಮೂರನೇ ತಂಡದ ನೇತೃತ್ವವಹಿ ಸಿರುವ ಕೇಂದ್ರ ಜಲಶಕ್ತಿ ಆಯೋಗದ ನಿರ್ದೇಶಕ ವಿ.ಅಶೋಕ್ ಕುಮಾರ್ ಹೇಳಿದರು.
ಈಗಾಗಲೇ ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಬರ ಅಧ್ಯಯನ ಕಾರ್ಯಕೈಗೊಂಡು, ಶನಿವಾರ ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಯ ವಿವಿಧೆಡೆ ರೈತರ ಜಮೀನುಗಳಿಗೆ ಭೇಟಿ ನೀಡಿ, ಬರ ಪರಿಸ್ಥಿತಿಯ ಅಧ್ಯಯನ ಮಾಡಲಾಗುತ್ತಿದೆ. ಜಿಲ್ಲೆಯ ಬರ ಪರಿಸ್ಥಿತಿಯ ಕುರಿತು ರೈತರೊಂದಿಗೆ ಸಂವಾದ ನಡೆಸಿ, ಮಾಹಿತಿ ಪಡೆಯಲಾಗುತ್ತಿದೆ. ಇದರ ಜೊತೆಗೆ ಜಿಲ್ಲಾಡಳಿತವು ಸಹ ಬರದ ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿದೆ ಎಂದು ತಿಳಿಸಿದ ಅವರು, ಜಿಲ್ಲೆಯ ವಾಸ್ತವ ಸ್ಥಿತಿಯ ವರದಿಯನ್ನು ರಾಜ್ಯದ ಬರ ಅಧ್ಯಯನ ತಂಡದ ನೇತೃತ್ವ ವಹಿಸಿರುವ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ಅವರಿಗೆ ಸಲ್ಲಿಸಲಾಗುವುದು, ಬಳಿಕ ರಾಜ್ಯದ ಸಂಗ್ರಹಿತ ಕ್ರೋಢೀಕೃತ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾ ಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ವಿ ವೆಂಕಟೇಶ್ .ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ ಇಟ್ನಾಳ್,ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇ ಶಕ ಶ್ರೀನಿವಾಸ್ ಚಿಂತಾಲ್,ಉಪನಿರ್ದೇಶಕ ಶ್ರೀನಿವಾಸ್,ತೋಟ ಗಾರಿಕೆ ಇಲಾಖೆ ಎಕ್ಸೂಟಿವ್ ಇಂಜಿನಿಯರ್ ರವೀಂದ್ರ ನಾಯ್ಕ್, ತಹಸಿಲ್ದಾರ್ ಅರು ಣ್ ಕಾರಗಿ.ಇ ಓ ಕರಿಬಸಪ್ಪ ಎ.ಡಿ ತೋಟಯ್ಯ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಿಥುನ್ ಕಿಮಾವತ್,ಸಿಪಿಐ ಶ್ರೀನಿವಾಸ್ ರಾವ್, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿ ಸಾಧಿಕ್ ಉಲ್ಲಾ. ಆರ್ ಐ ಧನಂಜಯ್. ಪಶು ಇಲಾಖೆ ಮತ್ತು ವೈದ್ಯಕೀಯ ಇಲಾಖೆ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾ ರಿಗಳು. ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿರಂಜೀವಿ. ಗಂಗಾಧರಪ್ಪ.ಮುಖಂಡರಾದ ಪಲ್ಲಾ ಗಟ್ಟೆ ಶೇಖ ರಪ್ಪ ಮಹಮ್ಮದ್ ಗೌಸ್.ಪೇಂಟ್ ಕಲೀಲ್ ಸಾಬ್. ರಮೇಶ್ ರೆಡ್ಡಿ. ರಂಗನಾಥ್ ರೆಡ್ಡಿ. ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.