ಪ್ರಜಾ ನಾಯಕ ಸುದ್ದಿ ಬೆಂಗಳೂರು : ಐತಿಹಾಸಿ ಗೆಲುವು ಸಾಧಿಸಿ ದ ಕಾಂಗ್ರೆಸ್ ಶನಿವಾರ ಸರ್ಕಾರ ರಚನೆಯ ಬಳಿಕ ಮೊದಲ ಕ್ಯಾಬಿನೆ ಟ್ ನಲ್ಲಿ 5 ಗ್ಯಾರಂಟಿ ಘೋಷಣೆಗಳಿಗೆ ತಾತ್ವಿಕವಾಗಿ ಸಂಪುಟದಲ್ಲಿ ಒಪ್ಪಿಗೆ ನೀಡಿದ್ದೇವೆ ಎಂದು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ, ಕರ್ನಾಟಕವನ್ನು ಆರ್ಥಿಕ ಇಕ್ಕಟ್ಟಿಗೆ ಸಿಲುಕಿಸದೆ ಗ್ಯಾರಂಟಿಗಳ ಈಡೇರಿಕೆ ಎಂದು ಭರವಸೆ ನೀಡಿದರು. 5 ಗ್ಯಾರಂಟಿ ಘೋಷಣೆಗಳಲ್ಲಿ ಒಂದಾಗಿರುವ ಗೃಹ ಜ್ಯೋತಿ ಯೋಜನೆಯಡಿ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುತ್ತೇವೆ. ಇದಕ್ಕೆ ಸುಮಾರು ತಿಂಗಳಿಗೆ 1200 ಕೋಟಿ ರೂ. ಆಗಬಹುದು. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮನೆ ಯಜಮಾನಿ ಗೆ ಪ್ರತಿ ತಿಂಗಳು 2000 ರೂ. ಹಾಕಲಾಗುವುದು.
ಪಟ್ಟಾಭಿಷೇಕದ ಬಳಿಕ ಸಿದ್ದರಾಮಯ್ಯ ಘರ್ಜನೆ ಇಂದೇ 5 ಗ್ಯಾರಂಟಿ ಘೋಷಣೆ
ಅನ್ನ ಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ, ಈ ವರ್ಷದ ಪದವೀ ದರ, ಪಿಎಚ್ಡಿ, ಎಂಬಿಬಿಎಸ್ ಪದವೀದರ ನಿರುದ್ಯೋಗಿಗಳಿಗೆ ಎರಡೂವರೆ ವರ್ಷಗಳ ವರೆಗೆ ತಿಂಗಳಿಗೆ ಮೂರು ಸಾವಿರ ರೂ. ನೀಡಲಾಗುವುದು. ಈ ನಡುವೆ ಉದ್ಯೋಗ ಸಿಕ್ಕರೆ ಯುವ ನಿಧಿ ನೀಡಲಾಗುವುದಿಲ್ಲ. ಡಿಪ್ಲಮಾ ಪಾಸ್ ಮಾಡಿದ ನಿರುದ್ಯೋಗಿಗಳಿ ಒಂದೂವರೆ ಸಾವಿರ ರೂ. ನೀಡಲಾಗವುದು ಎಂದು ಹೇಳಿದ್ದು, ಎಲ್ಲಾ ಸರ್ಕಾರಿ ಬಸ್ನಲ್ಲಿ ಪ್ರಯಾಣಿಸುವ ಕರ್ನಾಟಕದ ಮಹಿಳೆ ಯರಿಗೆ ಫ್ರೀ ಪಾಸ್ ನೀಡಲಾಗುವುದು, ಇದು ಬೇರೆ ರಾಜ್ಯಗಳ ಮಹಿಳೆಯರಿಗೆ ಅನ್ವಯಿಸುವುದಿಲ್ಲ ಎಂದು ಹೇಳಿದರು.
ಇನ್ನೂ ಕೇಂದ್ರ ಸರ್ಕಾರದ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದು, ನ್ಯಾಯಯುತವಾಗಿ ಕರ್ನಾಟಕಕ್ಕೆ ಸಿಗಬೇಕಿದ್ದ 5495 ಕೋಟಿ ರೂ.ವನ್ನು ಬಿಜೆಪಿ ರಾಜ್ಯ ಸರ್ಕಾರ ಕೇಳಿಲ್ಲ. ರಾಜ್ಯದ ಸಂಸದರು ಕೇಳಿಲ್ಲ. ಕೇಂದ್ರ ಸರ್ಕಾರದಿಂದ ನಮ್ಮ ರಾಜ್ಯಕ್ಕೆ ಅನ್ಯಾ ಯ ಆಗುತ್ತಿದೆ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ದ್ದಾಗ ಈ ದೇಶದ ಸಾಲ 53 ಲಕ್ಷದ 11 ಸಾವಿರ ಕೋಟಿ ಇತ್ತು. ಮೋದಿ ಅಧಿಕಾರಕ್ಕೆ ಬಂದ ನಂತರ 9 ವರ್ಷಗಳಲ್ಲಿ ದೇಶದ ಮೇಲೆ 155 ಲಕ್ಷ ಕೋಟಿ ಆಗಿದೆ ಎಂದು ಕಿಡಿಕಾರಿದರು.
ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಸರ್ಕಾರದಲ್ಲಿ 4 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ನಾನು ಐದು ವರ್ಷಗಳ ಕಾಲ ಸರ್ಕಾರ ನಡೆಸಿದಾಗಲೂ ಇಷ್ಟೊಂದು ಸಾಲ ಮಾಡಿರಲಿಲ್ಲ. ಹೀಗಾಗಿ ನಾವು ಕರ್ನಾಟಕವನ್ನು ಆರ್ಥಿಕ ದಿವಾಳಿಗೆ ಸಿಲುಕಿಸದೆ ನಾವು ಗ್ಯಾರಂಟಿಗಳನ್ನು ಈಡೇರಿಸುತ್ತೇವೆ. ನಮ್ಮ ಯೋಜನೆಗಳಿಗೆ ಸುಮಾರು 50 ಸಾವಿರ ಕೋಟಿ ಆಗಬಹುದು. ಕೇಂದ್ರದಿಂದ ಈ ವರ್ಷ 50 ಸಾವಿರ ಕೋಟಿ ರೂ. ಬರುತ್ತದೆ. ಕರ್ನಾಟಕದಿಂದ 4 ಲಕ್ಷ ಕೋಟಿ ರೂ. ತೆರಿಗೆ ಕಟ್ಟುತ್ತೇವೆ. ಆದರೆ ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮಗೆ ಅನ್ಯಾಯವಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.
ಐದು ಗ್ಯಾರಂಟಿ ಘೋಷಣೆಗಳು ಮಾತ್ರವಲ್ಲದೇ ನಮ್ಮ ಪ್ರಣಾಳಿಕೆ ಯಲ್ಲಿ ಜನರಿಗೆ ಅನೇಕ ಭರವಸೆಗಳನ್ನು ಕೊಟ್ಟಿದ್ದೆವು. ಇದು ಕೇವಲ ಒಂದು ವರ್ಷದಲ್ಲಿ ಈಡೇರಿಸುವ ಭರವಸೆ ಅಲ್ಲ. ಅಲ್ಲದೇ ರಾಜ್ಯದ ಜನರಿಗೆ ಐದು ಗ್ಯಾರಂಟಿಗಳನ್ನು ನೀಡಿದ್ದೆವು. ಮೊದಲ ಸಂಪುಟದಲ್ಲಿ 5 ಗ್ಯಾರಂಟಿ ಜಾರಿ ಬಗ್ಗೆ ಹೇಳಿದ್ದೆವು. ನಮ್ಮ ಸರ್ಕಾರ ನುಡಿದಂತೆ ನಡೆಯುತ್ತದೆ. ಕಳೆದ ಬಾರಿ ನಾವು 158 ಭರವಸೆ ಗಳನ್ನು ಈಡೇರಿಸಿದ್ದೆವು. ಹೆಚ್ಚುವರಿಯಾಗಿ 30 ಕಾರ್ಯಕ್ರಮ ಗಳನ್ನು ಜಾರಿ ಮಾಡಿದ್ದೆವು ಎಂದು ಹೇಳಿದರು.
ಇನ್ನೂ ಮುಂದಿನ ಸಚಿವ ಸಂಪುಟ ಸಭೆ ನಂತರ 5 ಗ್ಯಾರಂಟಿ ಘೋಷಣೆಯನ್ನ ಜಾರಿ ಮಾಡಲಾಗುವುದು. ಇತ್ತ ಸೋಮವಾರ, ಮಂಗಳವಾರ, ಬುಧವಾರ ವಿಧಾನಸಭೆ ಅಧಿವೇಶನ ಕರೆಯುತ್ತಿ ದ್ದೇವೆ, ಹೊಸ ಸಭಾಪತಿಯನ್ನು ಆಯ್ಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.