ಪ್ರಜಾ ನಾಯಕ ಸುದ್ದಿ ಜಗಳೂರು -: 2023-24 ನೇ ಸಾಲಿನಲ್ಲಿ ಮುಂಗಾರು ಮಳೆ ಅತಿವೃಷ್ಟಿಯಿಂದ ಉಂಟಾಗಬಹುದಾದ ಪರಿ ಸ್ಥಿತಿ ನಿರ್ವಹಣೆ ಕುರಿತು ಮುಂಜಾಗ್ರತ ಕ್ರಮ ಕೈಗೊಳ್ಳಲು ಮಾನ್ಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಇಂದು 11 ಗಂಟೆಗೆ ಜಗಳೂರು ಪಟ್ಟಣದ ತಾಲೂಕು ಪಂಚಾ ಯತಿ ಸಭಾಂಗಣದಲ್ಲಿ ಅತಿವೃಷ್ಟಿಯಿಂದ ಉಂಟಾಗಬಹುದಾದ ಪರಿಸ್ಥಿತಿ ನಿರ್ವಹಣೆ ಕುರಿತು ಸಭೆಯನ್ನು ಏರ್ಪಡಿಸಲಾಗಿದೆ
ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳು ಹಾಗೂ ಉಪ ತಹಶೀಲ್ದಾರ್ ಹಾಗೂ ರಾಜಸ್ವ ನಿರೀಕ್ಷಕರುಗಳು ಗ್ರಾಮ ಆಡಳಿತ ಅಧಿಕಾರಿಗಳೊಂದಿಗೆ ಸಭೆ ಕರೆಯಲಾಗಿದ್ದು ಸದರಿ ಸಭೆಗೆ ತಾವು ಖುದ್ದಾಗಿ ಅಂಕಿ ಅಂಶ ಗಳ ವರದಿಯೊಂದಿಗೆ ಕಡ್ಡಾಯವಾಗಿ ಹಾಜರಾಗಲು ತಿಳಿಸಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಹಶೀಲ್ದಾರ್ ಜಿ.ಸಂತೋಷ್ ಕುಮಾರ್ ತಿಳಿಸಿದ್ದಾರೆ
0 Today: 2