ಪ್ರಜಾ ನಾಯಕ ಸುದ್ದಿ ಜಗಳೂರು -: ಸರ್ಕಾರದ ಮಾರ್ಗಸೂಚಿ ಯನ್ವಯ ಜಿಲ್ಲೆಯ ಬರಪರಿಸ್ಥಿತಿಯ ವಾಸ್ತವ ಸ್ಥಿತಿಯ ವರದಿಯ ನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಕೇಂದ್ರ ಬರ ಅಧ್ಯ ಯನ ಮೂರನೇ ತಂಡದ ನೇತೃತ್ವವಹಿಸಿರುವ ಕೇಂದ್ರ ಜಲಶಕ್ತಿ ಆಯೋಗದ ನಿರ್ದೇಶಕ ವಿ.ಅಶೋಕ್ ಕುಮಾರ್ ಹೇಳಿದರು.
ಜಗಳೂರು ತಾಲ್ಲೂಕಿನ ವಿವಿಧೆಡೆ ರೈತರ ಜಮೀನುಗಳಿಗೆ ಭೇಟಿ ನೀಡಿ, ಮಳೆ ಕೊರತೆಯಿಂದ ಉಂಟಾದ ಬೆಳೆ ಹಾನಿ ವೀಕ್ಷಣೆ ಮಾಡಿ ನಂತರ ಮಾಧ್ಯಮದರೊಂದಿಗೆ ಮಾತನಾಡಿದರು.
ಈಗಾಗಲೇ ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಬರ ಅಧ್ಯಯನ ಕಾರ್ಯಕೈಗೊಂಡು, ಶನಿವಾರ ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಯ ವಿವಿಧೆಡೆ ರೈತರ ಜಮೀನುಗಳಿಗೆ ಭೇಟಿ ನೀಡಿ, ಬರ ಪರಿಸ್ಥಿತಿಯ ಅಧ್ಯಯನ ಮಾಡಲಾಗುತ್ತಿದೆ. ಜಿಲ್ಲೆಯ ಬರ ಪರಿಸ್ಥಿತಿಯ ಕುರಿತು ರೈತರೊಂದಿಗೆ ಸಂವಾದ ನಡೆಸಿ, ಮಾಹಿತಿ ಪಡೆಯಲಾಗುತ್ತಿದೆ.
ಇದರ ಜೊತೆಗೆ ಜಿಲ್ಲಾಡಳಿತವು ಸಹ ಬರದ ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿದೆ ಎಂದು ತಿಳಿಸಿದ ಅವರು, ಜಿಲ್ಲೆಯ ವಾಸ್ತವ ಸ್ಥಿತಿಯ ವರದಿಯನ್ನು ರಾಜ್ಯದ ಬರ ಅಧ್ಯಯನ ತಂಡದ ನೇತೃತ್ವ ವಹಿಸಿರುವ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲ ಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ಅವರಿಗೆ ಸಲ್ಲಿಸಲಾಗುವುದು, ಬಳಿಕ ರಾಜ್ಯದ ಸಂಗ್ರಹಿತ ಕ್ರೋಢೀಕೃತ ವರದಿ ಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಎಂ.ವಿ ವೆಂಕಟೇಶ್ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ ಇಟ್ನಾಳ್, ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇ ಶಕ, ತೋಟಗಾರಿಕೆ ಇಲಾಖೆ, ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ಅಧಿ ಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.