ಪ್ರಜಾ ನಾಯಕ ಸುದ್ದಿ ದಾವಣಗೆರೆ -: ಇದೇ ಮಾರ್ಚ್ 25 ರಂದು ದಾವಣಗೆರೆಗೆ ಭಾರತದ ಪ್ರಧಾನ ಮಂತ್ರಿಗಳು ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಶಿಷ್ಟಾಚಾರ ಹಾಗೂ ಸುರಕ್ಷತಾ ಕ್ರಮಗಳಲ್ಲಿ ಯಾವುದೇ ಲೋಪವಾಗದಂತೆ ಗರಿಷ್ಠ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಪ್ರಧಾನ ಮಂತ್ರಿಗಳ ಭೇಟಿಯ ಹಿನ್ನಲೆಯಲ್ಲಿ ಪೂರ್ವ ಸಿದ್ಧತೆಗಳ ಕುರಿತಂತೆ ಅಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚಿಸಿದ ಅವರು,ಖಾಸಗಿ ಕಾರ್ಯಕ್ರಮ ನಿಮಿತ್ಯ ದಾವಣಗೆರೆ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ. ಆದ್ಯಾಗ್ಯೂ ಶಿಷ್ಟಾಚಾರ ಹಾಗೂ ಸುರಕ್ಷತಾ ಜವಾಬ್ದಾರಿ ಎಲ್ಲ ಅಧಿಕಾರಿಗಳ ದ್ದಾಗಿದೆ. ಗರಿಷ್ಠ ಎಚ್ಚರಿಕೆಯಿಂದ ತಮಗೆ ವಹಿಸಿದ ಜವಾಬ್ದಾರಿ ಯನ್ನು ನಿರ್ವಹಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು, ಕೇಂದ್ರ ಹಾಗೂ ರಾಜ್ಯದ ವಿವಿಧ ಸಚಿವರು, ಹಿರಿಯ ಅಧಿಕಾರಿಗಳು, ಎಸ್.ಪಿ.ಜಿ. ತಂಡ ಸೇರಿದಂತೆ ಗಣ್ಯರು ಆಗಮಿಸಲಿದ್ದಾರೆ. ವಸತಿ ವ್ಯವಸ್ಥೆ, ವಾಹನ ವ್ಯವಸ್ಥೆ, ಊಟ-ಉಪಹಾರದ ವ್ಯವಸ್ಥೆ ಸೇರಿದಂತೆ ಎಲ್ಲ ರೀತಿಯ ಶಿಷ್ಟಾಚಾರ ವ್ಯವಸ್ಥೆಯನ್ನು ಕೈಗೊಳ್ಳಬೇಕು ಎಂದರು.
ನಗರದ ಜಿ.ಎಂ.ಐ.ಟಿ ಕಾಲೇಜಿನ ಪಕ್ಕದಲ್ಲಿ ಸುಮಾರು 400 ಎಕರೆ ಜಾಗದಲ್ಲಿ ಸಮಾವೇಶ ನಡೆಯಲಿದ್ದು ಕಾರ್ಯಕ್ರಮ ಸುಗ ಮ ನಿರ್ವಹಣೆ ಮತ್ತು ಯಶಸ್ಸಿಗೆ ವಿವಿಧ ತಂಡಗಳನ್ನು ರಚಿಸಿದ್ದು, ಆಯಾ ಅಧಿಕಾರಿಗಳಿಗೆ ನೀಡಲಾಗಿರುವ ಜವಬ್ದಾರಿಗಳನ್ನು ಚಾಚು ತಪ್ಪದೆ ಸಮರ್ಪಕವಾಗಿ ನಿರ್ವಹಿಸ ಬೇಕು. ವೇದಿಕೆ ನಿರ್ಮಾಣ, ಹೆಲಿಪ್ಯಾಡ್ ನಿರ್ಮಾಣ, ಪಾರ್ಕಿಂಗ್ ವ್ಯವಸ್ಥೆ, ಗಣ್ಯರ ಆಸನದ ವ್ಯವಸ್ಥೆ, ಸ್ವಚ್ಛತೆ, ಭದ್ರತೆ ಹೀಗೆ ಎಲ್ಲವು ಅಚ್ಚುಕಟ್ಟಾಗಿರ ಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಮುನ್ನೆಚ್ಚರಿಕೆಯಾಗಿ ಕಾರ್ಯಕ್ರಮ ಸ್ಥಳದಲ್ಲಿ ಆ್ಯಂಬುಲೆನ್ಸ್, ತಾತ್ಕ ಲಿಕ ಆಸ್ಪತ್ರೆ ಮತ್ತು ತುರ್ತು ಚಿಕಿತ್ಸೆಗೆ ನಗರದ ಎಸ್.ಎಸ್ ಆಸ್ಪತ್ರೆ ಯಲ್ಲಿ ಐ.ಸಿ.ಯು ಸ್ಥಾಪಿಸಬೇಕು. ಅಗ್ನಿ ಶಾಮಕ ವಾಹನ ಇರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ. ಬಿ ರಿಷ್ಯಂತ್ ಅವರು ಮಾತ ನಾಡಿ, ಎಸ್.ಪಿ.ಜಿ. ಅವರ ಮಾರ್ಗಸೂಚಿಯಂತೆ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗುವುದು. ಹೆಲಿಪ್ಯಾಡ್ಗಳ ನಿರ್ಮಾಣ, ಸಂಪರ್ಕ ರಸ್ತೆ ದುರಸ್ತಿ, ಪಾಟ್ವೊಲ್ಗಳ ಭರ್ತಿಮಾಡುವುದು, ವಿದ್ಯುತ್ ಪೂರೈಕೆ ಯಲ್ಲಿ ಯಾವುದೇ ವ್ಯತ್ಯಯವಾಗದಂತೆ ನಿರಂತರ ವಿದ್ಯುತ್ ಪೂರೈಕೆ ,ಕಾರ್ಯಕ್ರಮದ ಸ್ಥಳವಲ್ಲದೆ ಇಡಿ ದಾವಣಗೆರೆ ನಗರದಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಗರಿಷ್ಠ ಎಚ್ಚರ ವಹಿಸಬೇಕು. ಅಗ್ನಿ ಶಾಮಕ ಸುರಕ್ಷತಾ ಕ್ರಮಗಳು, ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ವಾಗದರೆ ಪರ್ಯಾಯವಾಗಿ ಜನರೇಟರ್ ವ್ಯವಸ್ಥೆ ಸೇರಿದಂತೆ ಸೂಕ್ಷ್ಮವಾಗಿ ಎಲ್ಲವನ್ನು ನಿರ್ವಹಿಸುವಂತೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎ.ಚನ್ನಪ್ಪ, ಅಪರ ಜಿಲ್ಲಾಧಿಕಾರಿ ಲೋಕೇಶ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು