ಪ್ರಜಾ ನಾಯಕ ಸುದ್ದಿ ದಾವಣಗೆರೆ :- ವಿಧಾನಸಭಾ ಸಾರ್ವತ್ರಿಕ ಚುನಾವಣೆಯು ಮೇ 10 ರಂದು ನಡೆಯಲಿದ್ದು, ಮತದಾರರು ಯಾವುದೇ ಆಸೆ ಆಮಿಶಗಳಿಗೆ ಒಳಗಾಗದೆ ನೈತಿಕ ಹಾಗೂ ಪ್ರಾಮಾಣಿಕ ಮತದಾನ ಮಾಡಿ ಉತ್ತಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದರು.
ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿ ಕಾರ ಮತ್ತು ಜಿಲ್ಲಾ ವಕೀಲರ ಸಂಘದ ಸಹಯೋಗ ದೊಂದಿಗೆ ಜಿಲ್ಲಾ ವಕೀಲರ ಸಂಘದ ಸಾಂಸ್ಕøತಿಕ ಭವನದಲ್ಲಿ ಶುಕ್ರವಾರ ಜರುಗಿದ ಮತದಾನ ಜಾಗೃತಿ ಚಿತ್ರಕಲಾ ಪ್ರದರ್ಶನ ಕಾರ್ಯಕ್ರಮ ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿಧಾನಸಭಾ ಸಾರ್ವತ್ರಿಕ ಚುನಾವಣೆಯು 12 ದಿನ ಮಾತ್ರ ಬಾಕಿ ಉಳಿದಿದ್ದು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಒಟ್ಟು 14,42,553 ಮತದಾರರಿದ್ದು 1685 ಮತಗಟ್ಟೆಗಳನ್ನು ಸ್ಥಾಪಿಸಿ ವಿಶೇಷವಾಗಿ 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಗ್ರಾಮ, ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಶಾಲಾ ಕಾಲೇಜುಗಳಿಗೆ ಸ್ವಯಂ ಪ್ರೇರಿತರಾಗಿ ಹೋಗಿ ಶಾಲಾ ಮುಖ್ಯಸ್ಥರಿಂದ 18-19 ವರ್ಷದ ವಿದ್ಯಾರ್ಥಿಗಳ ದಾಖಲೆಗಳನ್ನು ಪಡೆದು ಮತದಾರರ ಪಟ್ಟಿಗೆ 38209 ಹೊಸದಾಗಿ ಯುವ ಮತದಾರರನ್ನು ಸೇರಿಸಲಾಗಿದೆ ಎಂದರು.
ಮತದಾನ ಜಾಗೃತಿಗೆ ಕಾಲ್ನಡಿಗೆ, ಸೈಕಲ್, ಬೈಕ್ ಜಾಥಾ, ಚಿತ್ರಕಲೆ ಹಾಗೂ ಹಲವಾರು ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.ಈ ಹಿನ್ನೆಲೆ ಯಲ್ಲಿ ನ್ಯಾಯಾಂಗ ಇಲಾಖೆ ಮತದಾನ ಜಾಗೃತಿಗೆ ಕೈ ಜೋಡಿಸಿರು ವುದು ಸಂತಸ ತಂದಿದೆ ಎಂದರು.
ಜಿಲ್ಲಾ ಹಾಗೂ ಪ್ರಧಾನ ಮತ್ತು ಸೆಷನ್ಸ್ ನ್ಯಾಯಧೀಶರಾದ ರಾಜೇ ಶ್ವರಿ ಮಾತನಾಡಿ ಚುನಾವಣೆಯನ್ನು ಪ್ರಜಾಪ್ರಭುತ್ವದ ಹಬ್ಬ, ನಾವು ಚಲಾಯಿಸುವ ಪ್ರತಿಯೊಂದು ಮತಕ್ಕೂ ಅದರದೆ ಮೌಲ್ಯ ವಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮಗೆ ಬೇಕಾದ ಉತ್ತಮ ಜನಪ್ರತಿ ನಿಧಿಯನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ವಕೀಲ ಸಂಘದ ಅಧ್ಯಕ್ಷರಾದ ಎಚ್. ಅರುಣ್ ಕುಮಾರ್, 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯ ಧೀಶ ಜೆ.ಎ. ವಿಜಯಾನಂದ, ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಟಿ.ಎಂ. ನಿವೇದಿತಾ, ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಬಸವರಾಜ್ ಜಿ.ಕೆ, ಕಾರ್ಯದರ್ಶಿ ಬಸವ ರಾಜ್, ಖ್ಯಾತ ಚಿತ್ರ ಕಲಾವಿದರಾದ ನಾಮದೇವ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಕೀಲರು ಉಪಸ್ಥಿತರಿದ್ದರು.