ಪ್ರಜಾ ನಾಯಕ ಸುದ್ದಿ ದಾವಣಗೆರೆ -: “ಕಲ್ಲೇಶ್ವರ ದೇವರ”ಹೆಸರಿ ನಲ್ಲಿ ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್ ಎಸ್ ಮಲ್ಲಿ ಕಾರ್ಜುನ್ ಸಚಿವರಾಗಿ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.ಬೆಂಗಳೂರಿನ ರಾಜಭವನದಲ್ಲಿ ಸಚಿವರು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆದಿದ್ದು, ರಾಜ್ಯ ಪಾಲರಾದ ಥಾವರ್ ಚಾಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದರು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಮತ್ತಿತರರಿದ್ದರು.
ಎಸ್ ಎಸ್ ಮಲ್ಲಿಕಾರ್ಜುನ್ ಅವರು ಹಿರಿಯ ಶಾಸಕ ಶಾಮ ನೂರು ಶಿವಶಂಕರಪ್ಪ ಅವರ ಮೂರನೇ ಪುತ್ರರಾಗಿದ್ದು, ಬಿಕಾಂ ಪದವೀಧರರಾಗಿದ್ದಾರೆ.
ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್ ಎಸ್ ಮಲ್ಲಿಕಾರ್ಜುನ್, ಒಟ್ಟು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ, 1989 ರಲ್ಲಿ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 1999 ರಲ್ಲಿ ಗೆಲುವು ಸಾಧಿಸಿ ಎಸ್ ಎಂ ಕೃಷ್ಣ ಸರ್ಕಾರದಲ್ಲಿ ಯುವಜನ ಮತ್ತು ಕ್ರೀಡಾ ಇಲಾಖೆ ಸಚಿವರಾಗಿದ್ದರು, 2013ರಲ್ಲಿ ಗೆಲುವು ಸಾಧಿಸಿ ಸಿದ್ದರಾಮಯ್ಯ ಸರ್ಕಾರದಲ್ಲಿ 2016 ರಲ್ಲಿ ತೋಟಗಾರಿಕೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾಗಿದ್ದರು,
2018 ರಲ್ಲಿ ಬಿಜೆಪಿ ಶಾಸಕ ಎಸ್ ಎ ರವೀಂದ್ರನಾಥ್ ವಿರುದ್ದ ಸೋಲು ಕಂಡಿದ್ದರು, 2023 ರಲ್ಲಿ ಮತ್ತೆ ಗೆಲುವು ಸಾಧಿಸಿದ ಎಸ್ ಎಸ್ ಮಲ್ಲಿಕಾರ್ಜುನ್, ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿ ರಾಜ ಭವನದಲ್ಲಿ ಶನಿವಾರ ಪ್ರಮಾಣ ವಚನ ಸ್ವೀಕಾರ ಮಾಡಿ ದ್ದಾರೆ.