ಪ್ರಜಾ ನಾಯಕ ಸುದ್ದಿ ಜಗಳೂರು :– ಪ್ಲಾಸ್ಟಿಕ್ ಮುಕ್ತ ಪರಿಸರದ ಬಗ್ಗೆ ವಿದ್ಯಾರ್ಥಿ ಯುವ ಸಮೂಹ ಜಾಗೃತಿ ಮೂಡಿಸಬೇಕು ಎಂದು ಪಟ್ಟಣಪಂಚಾಯಿತಿ ಮುಖ್ಯಾಧಿಕಾರಿ ಲೋಕ್ಯಾನಾಯ್ಕ ಸಲಹೆ ನೀಡಿದರು.
ಪಟ್ಟಣದ ಮಾಲತಿ ಪದವಿಪೂರ್ವ ಕಾಲೇಜಿನಲ್ಲಿ ಪಟ್ಟಣ ಪಂಚಾಯಿತಿ ಕಾರ್ಯಾಲಯದಿಂದ ಹಮ್ಮಿಕೊಂಡಿದ್ದ ಪ್ಲಾಸ್ಟಿಕ್ ಮುಕ್ತ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪರಿಸರ ಸ್ವಚ್ಛತೆ ಪ್ರತಿಯೊಬ್ಬರ ಹೊಣೆಯಾಗಬೇಕು.ಮಣ್ಣಿನಲ್ಲಿ ಕೊಳೆಯದ ಪ್ಲಾಸ್ಟಿಕ್ ತ್ಯಾಜ್ಯ ವಸ್ತಗಳ ಬಳಕೆ ನಿಷೇಧಿಸಬೇಕು. ಗ್ರಾಮೀಣ ಭಾಗದ ಅಂಗಡಿ ಹೊಟೆಲ್ ಮನೆಗಳಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆಮಾಡದಂತೆ ವಿದ್ಯಾರ್ಥಿಗಳು ಮನವರಿಕೆ ಮಾಡ ಬೇಕು.ವಿಷಪೂರಿತ ಅನಿಲ ವಿಸರ್ಜಿಸುವ ವಸ್ತುಗಳಿಂದ ಪರಿಸರ ಹಾನಿ ಉಂಟಾಗುತ್ತದೆ.ಒಣ ಕಸ ಹಸಿ ಕಸವನ್ನಾಗಿ ಬೇರ್ಪಡಿಸಿ ಕಸವಿಲೆವಾರಿ ವಾಹನಗಳಲ್ಲಿ ಹಾಕಬೇಕು ಎಂದರು.
ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಎನ್ ಎಸ್ ಎಸ್ ನಂತಹ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಕೊಂಡು.ಪರಿಸರ ಸ್ವಚ್ಛತೆ ಜಾಗೃತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು ಎಂದು ಕಿವಿ ಮಾತು ಹೇಳಿದರು.
ಈ ಸಂದರ್ಭದಲ್ಲಿ ಸೇವಾಲಾಲ್ ಸಂಸ್ಥೆಯ ಕಾರ್ಯದರ್ಶಿ ಮುನಿಯನಾಯ್ಕ, ಆರೋಗ್ಯ ನಿರೀಕ್ಷಕ ಕಿಫಾಯತ್,ಅಲೆಮಾರಿ ಸಂಘದ ಶಿವಣ್ಣ,ಪ್ರಾಂಶುಪಾಲ ಶಿವಕುಮಾರ್ ನಾಯ್ಕ,ಉಪನ್ಯಾಸ ಕರಾದ ಜಯಣ್ಣ,ಸರ್ವಣ್,ಮಹಾಂತೇಶ್,ಇದ್ದರು.