ಪ್ರಜಾ ನಾಯಕ ಸುದ್ದಿ ಜಗಳೂರು :- ವಿಧಾನಸಭಾ ಕ್ಷೇತ್ರದ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು ಎಲ್ಲ ರಾಜಕೀಯ ಪಕ್ಷಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಮತ್ತು ಶಾಂತಿಯುತ ಪಾರದರ್ಶಕ ಚುನಾವಣೆ ನಡೆಸಲು ಸಹಕರಿಸಬೇಕು ಎಂದು ಚುನಾವಣಾಧಿಕಾರಿ ಎಸ್ ರವಿ ಸೂಚನೆ ನೀಡಿದರು.
ಪಟ್ಟಣದ ಮಿನಿ ವಿಧಾನಸೌಧ ಸಭಾಂಗಣದ ಚುನಾವಣಾ ಅಧಿಕಾರಿಗಳ ಕಚೇರಿಯಲ್ಲಿ ನಡೆದ ವಿವಿಧ ರಾಜಕೀಯ ಪಕ್ಷಗಳ ಅಧ್ಯಕ್ಷರು ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ದರು.
ಏಪ್ರಿಲ್ 13ರಂದು ಅಧಿ ಸೂಚನೆ ಜಾರಿಗೊಂಡು ಅಂದಿನಿಂದಲೇ ನಾಮಪತ್ರ ಸ್ವೀಕರಿಸುವ ಕಾರ್ಯ ನಡೆಯಲಿದೆ ಈ ಹಿನ್ನಲೆಯಲ್ಲಿ ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳು ಸಲ್ಲಿಸಬೇಕಾದ ದಾಖಲೆಗಳ ಬಗ್ಗೆ ಹಾಗೂ ಪಾಲಿಸಬೇಕಾದ ನೀತಿ ನಿಯಮಗಳ ಬಗ್ಗೆ ಪಕ್ಷಗಳ ಮುಖಂಡರಿಗೆ ಮಾಹಿತಿ ನೀಡಿದರು.
ಅಭ್ಯರ್ಥಿಗಳು ಪ್ರತಿದಿನದ ಲೆಕ್ಕವನ್ನು ಸರಿಯಾಗಿ ನಿರ್ವಹಿಸಬೇಕು ಅಗತ್ಯ ಮಾಹಿತಿಯನ್ನು ಕಚೇರಿಯಲ್ಲಿರುವ ವೆಚ್ಚವೀಕ್ಷಕರ ಮಾರ್ಗ ದರ್ಶನ ಪಡೆದುಕೊಳ್ಳಬೇಕು,₹ 40 ಲಕ್ಷ ಮೀರದಂತೆ ಖರ್ಚು ಮಾಡಬೇಕು ಹಾಗೂ ಕಡ್ಡಾಯವಾಗಿ ಚೆಕ್ ಮತ್ತು ಆನ್ಲೈನ್ ಮೂಲಕ ಪಾವತಿಸಬೇಕು ಎಂದು ಸಲಹೆ ನೀಡಿದರು.
ರ್ಯಾಲಿ, ಸಭೆ, ಸಮಾರಂಭಗಳು ಮತ್ತು ಚುನಾವಣೆಯ ಪ್ರಚಾರಕ್ಕಾಗಿ ಮತ್ತು ತಾತ್ಕಾಲಿಕ ಕಚೇರಿ ತೆರೆಯಲು ಕಡ್ಡಾಯವಾಗಿ ಅನುಮತಿ ಪಡೆಯಬೇಕು. “ಸುವಿಧಾ ಆಪ್ “ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು, 24 ಗಂಟೆ ಒಳಗಾಗಿ ಅನುಮತಿ ನೀಡಲಾಗುವುದು. ಆದರೆ ಸಭೆಗೆ 48 ಗಂಟೆ ಮುಂಚೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸ ಬೇಕಾಗುತ್ತದೆಎಂದು ಅವರು ತಿಳಿಸಿದರು.
ಚುನಾವಣಾ ಅಕ್ರಮಗಳ ಪರಿಶೀಲನೆಗಾಗಿ ಮೂರು ವಿಚಕ್ಷಣ ದಳಗಳನ್ನು ರಚಿಸಲಾಗಿದೆ, 5 ಚೆಕ್ ಪೋಸ್ಟ್ಗಳನ್ನು ತೆರೆಯಲಾಗಿದೆ. ಸಾರ್ವಜನಿಕರು ಸಹ “ಸಿ ವಿಜಿಲ್ ಮೊಬೈಲ್ ಆಪ್” ಮೂಲಕ ಫೋಟೋ ವಿಡಿಯೋ ಸಹಿತ ದೂರು ದಾಖಲಿಸಲು ಅವಕಾಶ ಇರುತ್ತದೆ. ಸಾರ್ವಜನಿಕರು ಸಹ ಚುನಾವಣಾ ಅಕ್ರಮಗಳನ್ನು ತಡೆಯುವಲ್ಲಿ ಸಹಕರಿಸಲು ಚುನಾವಣಾ ಅಧಿಕಾರಿ ಎಸ್ ರವಿ ಮಾನವಿ ಮಾಡಿಕೊಂಡರು.
80 ವರ್ಷ ಮೇಲ್ಪಟ್ಟ ವೃದ್ಧರು ಹಾಗೂ ವಿಕಲಚೇತನರು ಮನೆ ಯಿಂದಲೇ ಮತದಾನ ಮಾಡಲು ಅವಕಾಶವಿದ್ದು ಏಪ್ರಿಲ್ 13ರ ಒಳಗಾಗಿ ನಮೂನೆ 12 ಡಿ ಯನ್ನು ಸಲ್ಲಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಈಗಾಗಲೇ ಜಾರಿಯಲ್ಲಿರುವ ಮಾದರಿ ನೀತಿ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಮತ್ತು ಶಾಂತಿಯುತ ಪಾರದರ್ಶಕ ಚುನಾವಣೆಗೆ ಸಹಕರಿಸಬೇಕೆಂದು ಚುಣಾಧಿಕಾರಿ ಎಸ್, ರವಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ತಹಸಿಲ್ದಾರ್ ಹಾಗೂ ಸಹಾಯಕ ಚುನಾವಣಾ ಧಿಕಾರಿ ಜಿ ಸಂತೋಷ್ ಕುಮಾರ್,ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಅಧಿಕಾರಿಗಳು ಸಭೆಯಭಾಗವಹಿಸಿದ್ದರು.