ಪ್ರಜಾ ನಾಯಕ ಸುದ್ದಿ ಬೆಂಗಳೂರು :- ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹ ಜ್ಯೋತಿ’ ಯೋಜನೆಯ ಪ್ರತಿ ಗೃಹ ಬಳಕೆ ಯ ಮಾಸಿಕ 200 ಯೂನಿಟ್ ಗಳವರೆಗೆ ಉಚಿತ ವಿದ್ಯುತ್ ಪಡೆ ಯಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಜೂನ್ 18 ರಿಂದ ಅರ್ಜಿ ಸಲ್ಲಿಕೆ ಆರಂಭ ಆರಂಭವಾಗಲಿದೆ.
ಈ ಯೋಜನೆ ಪಡೆಯಲು ಗ್ರಾಹಕರು ಯಾವೆಲ್ಲಾ ಕ್ರಮಗಳನ್ನು ಅನುಸರಿಸಬೇಕು ಎಂಬ ವಿವರ ಇಲ್ಲಿದೆ. ಉಚಿತ 200 ಯೂನಿಟ್ ವಿದ್ಯುತ್ ಪಡೆಯಲು https://sevasindhugs.karnataka.gov.in ನೋಂದಾಯಿಸಿಕೊಳ್ಳಬೇಕಿದೆ. ಖುದ್ದು ನೀವೆ ಮೊಬೈಲ್/ಕಂಪ್ಯೂಟರ್/ಲ್ಯಾಪ್ಟಾಪ್ ಗಳಲ್ಲಿ ಅಥವಾ ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ, ಗ್ರಾಮ ಪಂಚಾ ಯತ್,ನಾಡಕಛೇರಿ ಅಥವಾ ಎಲ್ಲಾ ವಿದ್ಯುತ್ ಕಛೇರಿಗಳಲ್ಲಿ ನೋಂದಾಯಿಸಬಹುದಾಗಿದೆ. ನೋಂದಣಿ ಮಾಡುವಾಗ ಆಧಾರ್ ಸಂಖ್ಯೆ, ವಿದ್ಯುತ್ ಬಿಲ್ ನಲ್ಲಿ ನೀಡಲಾದ ವಿದ್ಯುತ್ ಖಾತೆ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಮೀಪದ ವಿದ್ಯುತ್ ಕಛೇರಿಯನ್ನು ಸಂಪರ್ಕಿಸಿ ಅಥವಾ 24X7 ಸಹಾಯವಾಣಿ ಸಂಖ್ಯೆ 1912 ಕ್ಕೆ ಕರೆಮಾಡಿ ಅಥವಾ ಇಂಧನ ಇಲಾಖೆಯ
ಅಧಿಕೃತ ವೆಬ್ ಸೈಟ್ https://energy.karnataka.gov.in ಗೆ ಭೇಟಿ ನೀಡಿ. ನೋಂದಣಿ ಜೂನ್ 18, 2023 ರಿಂದ ಆರಂಭವಾಗಲಿದೆ.ಗೃಹ ಜ್ಯೋತಿ ಯೋಜನೆಯನ್ನು ಕೆಲವು ಷರತ್ತುಗಳೊಂದಿಗೆ ಜುಲೈ 1ರಿಂದ ಜಾರಿಗೊಳಿಸಲು ಅನುಮೋದನೆ ನೀಡಲಾಗಿದೆ.