ಪ್ರಜಾ ನಾಯಕ ಸುದ್ದಿ ಜಗಳೂರು :- ಹಿಂದುಳಿದ ವರ್ಗಗಳ ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ್ ಅರಸು ಅವರು ಸಮಾಜಕ್ಕೆ ಆದರ್ಶವಾಗಿದ್ದಾರೆ ಎಂದು ಶಾಸಕ ಬಿ.ದೆವೇಂದ್ರಪ್ಪ ಅಭಿಪ್ರಾಯವ್ಯಕ್ತಪಡಿಸಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಆಡಳಿತ,ತಾಲೂಕು ಪಂಚಾಯಿತಿ ಹಾಗೂ ಪಟ್ಟಣ ಪಂಚಾಯಿತಿ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ 108 ನೇ ದೇವರಾಜ್ ಅರಸು ಅವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬೆಳಕಿಲ್ಲದ ದಾರಿಯಲ್ಲಿ ನಡೆಯಬಹುದು ಆದರೆ ಕನಸಿಲ್ಲದ ದಾರಿಯಲ್ಲಿ ನಡೆಯಲು ಅಸಾಧ್ಯ ಎಂಬುದಕ್ಕೆ ಸಾಕ್ಷಿಯಾಗಿ ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರು ತಮ್ಮ ಆಡಳಿತಾವಧಿ ಯಲ್ಲಿ ರಾಜ್ಯದ ವಿವಿಧ ಆಯಾಮಗಳಲ್ಲಿ ಸರ್ವತೋಮುಖ ಅಭಿವೃದ್ದಿಗೆ ಮೈಲುಗಲ್ಲು ಹಾಕಿದ್ದಾರೆ.ಭೂ ಸುಧಾರಣೆ,ಸೇರಿದಂತೆ ಹಲವು ಮಜಲುಗಳಲ್ಲಿ ಆಡಳಿತ ನಡೆಸಿ ಆರ್ಥಿಕ ಸಂಪತ್ತು ಮತ್ತು ಅವಕಾಶಗಳನ್ನು ಎಲ್ಲಾ ವರ್ಗದವರಿಗೂ ಸಮಾನವಾಗಿ ಒದಗಿಸಿದ ಧೀಮಂತ ರಾಜಕಾರಣಿಯಾಗಿದ್ದಾರೆ ಎಂದು ಸ್ಮರಿಸಿದರು.
ದೇವರಾಜ್ ಅರಸು ಅವರ ಆಡಳಿತದ ಮಾರ್ಗವನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ಅನುಸರಿಸುತ್ತಿದ್ದಾರೆ.ನಂಜುಂಡಪ್ಪ ವರದಿಯಂತೆ ಹಿಂದುಳಿದ ತಾಲೂಕಿನ ಅಣೆಪಟ್ಟಿ ಇರಬಹುದು ಆದರೆ ನನ್ನ ಆಡಳಿತಾವಧಿಯಲ್ಲಿ ಅಧಿಕಾರಿಗಳ,ಸಾರ್ವಜನಿಕರ ಸಹಕಾರದಿಂದ ಹೊರಹೊಮ್ಮುವ ಜನಪರ ಕಾರ್ಯಕ್ರಮಗಳು ರಾಜ್ಯದಲ್ಲಿ ತನ್ನದೇ ಛಾಪು ಮೂಡಿಸುತ್ತಿವೆ ಎಂದು ಸಂತಸ ವ್ಯಕ್ತಪಡಿಸಿದರು.
ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಮೊದಲ ಆಧ್ಯತೆ :-ಡಾ.ಬಿ.ಆರ್. ಅಂಬೇಡ್ಕರ್ ಅವರ ಆಶಯದಂತೆ ಕ್ಷೇತ್ರದಲ್ಲಿ ನಾನು ಶಿಕ್ಷಣಕ್ಕೆ ಮೊದಲ ಆಧ್ಯತೆ ನೀಡುವೆ.ಸುಸಜ್ಜಿತ ವಿದ್ಯಾರ್ಥಿನಿಲಯಗಳ ವ್ಯವಸ್ಥೆ ಕಲ್ಪಿಸಲಾಗುವುದು.ಬಡವರ್ಗದ ಪೋಷಕರು ಸದುಪಯೋಗಪಡೆದುಕೊಂಡು ಮಕ್ಕಳ ಉಜ್ವಲ ಭವಿಷ್ಯ ರೂಪಿಸಬೇಕು ಎಂದು ಸಲಹೆ ನೀಡಿದರು.
ಇದೇ ವೇಳೆ ದೇವರಾಜ್ ಅರಸು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.ಶಿಕ್ಷಕ ರವಿಕುಮಾರ್ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಸಿದ್ದಮ್ಮನಹಳ್ಳಿ ಗ್ರಾಮದ ಅಲೆಮಾರಿ ಸಮು ದಾಯದ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದರು.ಪ್ರತಿ ಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪ್ರೊತ್ಸಾಹಿಸಲಾಯಿತು.
ಸಂದರ್ಭದಲ್ಲಿ ಪ.ಪಂ.ಸದಸ್ಯರಾದ ರಮೇಶ್ ರೆಡ್ಡಿ, ಲಲಿತಮ್ಮ, ನಿರ್ಮಲ,ಲುಕ್ಮಾನ್ ಖಾನ್,ಮಹಮ್ಮದ್ ಆಲಿ.ಗ್ರೇಡ್ -2 ತಹ ಶೀಲ್ದಾರ್ ಮಂಜಾನಂದ,ತಾ.ಪಂ ಇಓ ಚಂದ್ರಶೇಖರ್,ಪ.ಪಂ ಮುಖ್ಯಾಧಿಕಾರಿ ಲೋಕ್ಯಾನಾಯ್ಕ,ಲೊಕೋಪಯೋಗಿ ಎಇಇ ನಾಗರಾಜ್,ನಿವೃತ್ತ ಸಮಾಜಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಿ.ಮಹೇಶ್ವರಪ್ಪ,ಬಿಸಿಎಂ ಇಲಾಖೆ ವಿಸ್ತರಣಾಧಿಕಾರಿ ಗಳಾದ ಬಳ್ಳಾರಿ,ಅಸ್ಮಾಬಾನು,ನಿಲಯ ಮೇಲ್ವಿಚಾರಕರಾದ ದೇವೇಂದ್ರಪ್ಪ,ಎಐಯುಟಿಯುಸಿ ಸಂಘಟನೆ ಜಿಲ್ಲಾ ಕಾರ್ಯದರ್ಶಿ ನಿಂಗರಾಜ್ ಸಿದ್ದಮ್ಮನಹಳ್ಳಿ,ಮುಖಂಡರಾದ ಪಲ್ಲಾಗಟ್ಟೆ ಶೇಖರಪ್ಪ, ಮಹಮ್ಮದ್ ಗೌಸ್,ಸಣ್ಣಸೂರಯ್ಯ,ಸೇರಿದಂತೆ ಇದ್ದರು.