ಪ್ರಜಾ ನಾಯಕ ಸುದ್ದಿ ಜಗಳೂರು:- ಮಾರ್ಚ್.10 ರಂದು ಪಟ್ಟಣ ದ ಬಯಲು ರಂಗಮಂದಿರ ಆವರಣದಲ್ಲಿ ಸಂಜೆ 6 ಗಂಟೆಗೆ ನಡೆಯಲಿರುವ ಪ್ರಜಾ ಧ್ವನಿ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಭಾಗವಹಿಸಲಿದ್ದು.ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮಾಜಿ ಶಾಸಕ ಎಚ್.ಪಿ.ರಾಜೇಶ್ ಕರೆ ನೀಡಿದರು.
ಪಟ್ಟಣದ ವಿದ್ಯಾನಗರದಲ್ಲಿರುವ ಪತ್ರಿಕಾ ಭವನದಲ್ಲಿ ಕಾಂಗ್ರೆಸ್ ಪಕ್ಷದಿಂದ ನಡೆಸಿದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಎರಡು ಭಾಗಗಳಾಗಿ ವಿಂಗಡಿಸಿ ಪ್ರಜಾಧ್ವನಿ ಜನ ಜಾಗೃತಿ ಕಾರ್ಯಕ್ರಮ ಅಭಿಯಾನ ನಡೆಸಲಾಗುತ್ತಿದ್ದು. ಕರ್ನಾಟಕ ರಾಜ್ಯವನ್ನು ಎರಡು ಭಾಗಗಳಾಗಿ ಆಯ್ಕೆಮಾಡಿ ಕೊಂಡು ,ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇತೃತ್ವ ವಹಿಸಿದ್ದಾರೆ.ದಾವಣಗೆರೆ ಜಿಲ್ಲೆಯ ಚನ್ನಗಿರಿ, ಮಾಯಕೊಂಡ ,ಜಗಳೂರು ತಾಲೂಕು ಗಳಿಗೆ ಮಾರ್ಚ್ 10 ರಂದು ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಈ ಕಾರ್ಯಕ್ರಮಕ್ಕೆ ಕಾರ್ಯಾಧ್ಯಕ್ಷರಾದ ಸಲೀಂ ಅಹಮ್ಮದ್, ಜಮೀರ್ ಅಹಮ್ಮದ್,ಹಾಗೂ ಮಾಜಿ ಸಚಿವರಾದ ಎಚ್. ಆಂಜನೇಯ,ಎಸ್ ಎಸ್ ಮಲ್ಲಿಕಾರ್ಜುನ್, ಎಂ.ಬಿ.ಪಾಟೀಲ್, ಸೇರಿದಂತೆ ವಿಧದ ನಾಯಕರುಗಳು ಭಾಗವಹಿಸಲಿದ್ದು.ವಿಧಾನ ಸಭಾ ಕ್ಷೇತ್ರದಿಂದ ಸುಮಾರು 15000 ಕಾರ್ಯಕರ್ತರು ಸೇರಲಿದ್ದಾರೆ ಎಂದು ತಿಳಿಸಿದರು.
ಪ್ರಜೆಗಳ ಧ್ವನಿಯಾಗಿ ಕಾರ್ಯಕ್ರಮ:- ಪ್ರಜಾಧ್ವನಿ ಕಾರ್ಯ ಕ್ರಮದ ಮುಖ್ಯ ಉದ್ದೇಶ ಕಾಂಗ್ರೆಸ್ ಆಡಳಿತಾವಧಿಯಲ್ಲಿನ ಜನಪರಯೋಜನೆಗಳನ್ನು ಹಾಗೂ ಗ್ಯಾರಂಟಿ ಯೋಜನೆಗಳನ್ನು ಮನೆಬಾಗಿಲಿಗೆ ತಲುಪಿಸುವುದು.ಬಿಜೆಪಿ ದುರಾಡಳಿತ, ಪರ್ಸಂಟೇಜ್ ರಾಜಕಾರಣವನ್ನು ಮತದಾರರಿಗೆ ಮನವರಿಕೆ ಮಾಡಿ,,ಪ್ರಜೆಗಳ ಧ್ವನಿಯನ್ನು ಎತ್ತಿಹಿಡಿಯುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಎಸ್ ಟಿ ಘಟಕದ ಅಧ್ಯಕ್ಷ ಕೆ.ಪಿ. ಪಾಲಯ್ಯ,ಮುಖಂಡರಾದ,ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ, ಕೆಪಿಸಿಸಿ ತಾಲೂಕು ಉಸ್ತುವಾರಿ ಕಲ್ಲೇಶ್ ರಾಜ್ ಪಟೇಲ್,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಂಷೀರ್ ಅಹಮ್ಮದ್, ನರೇನಹಳ್ಳಿ ಕುಮಾರ್ ನಾಯ್ಕ.ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ತಿಪ್ಪೇಸ್ವಾಮಿ ಗೌಡ್ರು, ಪಲ್ಲಾಗಟ್ಟೆ ಶೇಖರಪ್ಪ, ಯುಜಿ ಶಿವಕುಮಾರ್,ಗೋಡೆ ಪ್ರಕಾಶ್, ವಿರೇಶ್,ರಾಜು, ಮಾಳಮ್ಮನಹಳ್ಳಿ ವೆಂಕಟೇಶ್, ಗುತ್ತಿದುರ್ಗ ರುದ್ರೇಶ್.ವಿಜಯ್.ಬೊಮ್ಮಲಿಂಗಪ್ಪ,ಸೇರಿದಂತೆ ಉಪಸ್ಥಿತರಿದ್ದರು.