ಪ್ರಜಾ ನಾಯಕ ಸುದ್ದಿ ಜಗಳೂರು :- ನನ್ನ ಆಡಳಿತಾವಧಿಯಲ್ಲಿ ಪಟ್ಟಣದ ತಾಲೂಕು ಕ್ರೀಡಾಂಗಣದ ಸಮಗ್ರ ಅಭಿವೃದ್ದಿಗೆ ಬದ್ದ ನಾಗಿರುವೆ ಎಂದು ಶಾಸಕ ಬಿ.ದೇವೇಂದ್ರಪ್ಪ ಭರವಸೆ ನೀಡಿದರು.
ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಸರಕಾರಿ ಪದವಿಪೂರ್ವ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಾಜಿ ಶಾಸಕ ಗುರುಸಿದ್ದನಗೌಡ ಅವರ ಆಡಳಿತಾವಧಿಯಲ್ಲಿ ತಾಲೂಕಿನ ಕ್ರೀಡಾಪಟುಗಳಿಗೆ ಅನುಕೂಲವಾಗಲು ಸುಸಜ್ಜಿತ ತಾಲೂಕು ಕ್ರೀಡಾಂಗಣ ನಿರ್ಮಿಸಲಾಗಿದೆ.ಆದರೆ ಕೆಲ ಮೂಲ ಭೂತ ಸೌಲಭ್ಯಗಳಿಂದ ವಂಚಿತವಾಗಿದ್ದು.ಮುಂದಿನ ದಿನಗಳಲ್ಲಿ ಕ್ರೀಡಾಸಚಿವರ ಬಳಿ ಮನವಿಮಾಡಿ ಹೆಚ್ಚು ಅನುದಾನ ತರುವ ಮೂಲಕ ಒಳಾಂಗಣ ಮತ್ತು ಹೊರಾಂಗಣ ಮೈದಾನ ಹಾಗೂ ಈಜುಕೊಳ,ಸಿಂಥಟಿಕ್ ಟ್ರ್ಯಾಕ್ ,ಸುತ್ತಲೂ ಗಿಡಮರಗಳು ಹಸಿ ರಿನಿಂದ ಕಂಗೊಳಿಸುವಂತೆ ಮಾಡುವೆ.ಅಲ್ಲದೆ ಒಬ್ಬ ಕಾವಲುಗಾರ ರನ್ನು ನಿಯೋಜಿಸುವೆ ತಾಲೂಕಿನ ಕ್ರೀಡಾಪಟುಗಳು ಸದುಪ ಯೋಗಪಡೆದುಕೊಳ್ಳಬೇಕು ಎಂದರು.
ಇತ್ತೀಚೆಗೆ ವಿದ್ಯಾರ್ಥಿ ಜೀವನ ಬಂಗಾರದ ಜೀವನ ಎಂಬ ನಾಣ್ಣುಡಿ ಯಿಂದ ಮರೀಚಿಕೆಯಾಗಿ ವಿಮುಖಗೊಳ್ಳುತ್ತಿದ್ದಾರೆ.ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಾಗಿ ಆಸಕ್ತಿದಾಯಕ ಕ್ಷೇತ್ರಗಳಲ್ಲಿ ಉನ್ನತ ಸಾಧನೆಗೈದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.
ಕಳೆದುಕೊಂಡ ಸಂಪತ್ತನ್ನು ಗಳಿಸಬಹುದು ಆದರೆ ಅನಾರೋಗ್ಯ ಪೀಡಿತರು ಆರೋಗ್ಯ ಪಡೆಯಲು ಅಸಾಧ್ಯ.ಸದೃಢ ದೇಹದಲ್ಲಿ ಸದೃಢ ಮನಸ್ಸು ಸಾಧ್ಯ ಎಂದರು
ತೀರ್ಪುಗಾರರು ಪಾರದರ್ಶಕವಾಗಿರಲಿ :- ತಾಲೂಕಿನ ಪ್ರತಿ ಕಾಲೇಜುಗಳ ಕ್ರೀಡಾಪಟುಗಳು ತೀರ್ಪುಗಾರರ ಮಕ್ಕಳಿದ್ದಂತೆ. ತಮ್ಮ ತೀರ್ಪು ಪಾರದರ್ಶಕವಾಗಿರಲಿ ಸೋಲು ಗೆಲುವು ಒಂದು ನಾಣ್ಯದ ಎರಡು ಮುಖಗಳಿದ್ದಂತೆ ಸಮಾನವಾಗಿ ಸ್ವೀಕರಿಸಬೇಕು ಎಂದು ಸಲಹೆ ನೀಡಿದರು.
ಪದವಿಪೂರ್ವ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕ ಎಸ್.ಜಿ. ಕರಿಸಿದ್ದಪ್ಪ ಮಾತನಾಡಿ,ಬರದನಾಡಿನಲ್ಲಿ ಕ್ರೀಡಾ ಪ್ರತಿಭೆಗಳಿಗೆ ಕೊರತೆಯಿಲ್ಲ ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಹೊರ ಹೊಮ್ಮಲಿ ಎಂದು ಶುಭಹಾರೈಸಿದರು.
ತಾಲೂಕಿನಲ್ಲಿ 11ಕಾಲೇಜುಗಳಿದ್ದು. ಪಿಯು ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸುತ್ತಿದೆ.ಪೋಷಕರು ತಮ್ಮ ಮಕ್ಕಳ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡಬೇಕು.ಸಮಾಜದಲ್ಲಿ ಪ್ರತಿ ಯೊಬ್ಬರೂ ಸುಶಿಕ್ಷಿತರಾಗಬೇಕು.ಕದಿಯಲಾರದ ಆಸ್ತಿ ಬೌದ್ದಿಕತೆ ಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಇದೇ ವೇಳೆ ತಾಲೂಕಿನ ಸೊಕ್ಕೆ ಗ್ರಾಮದಲ್ಲಿ ಸರಕಾರಿ ಪಿಯು ಕಾಲೇಜು ಆರಂಭಿಸಲು ಗ್ರಾಮಸ್ಥರ ಮನವಿ ಸ್ವೀಕರಿಸಿ ಶಾಸಕ ಬಿ.ದೇವೇಂದ್ರಪ್ಪ ಅವರು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾ ಉಪನಿರ್ದೇಶಕ ಕರಿಸಿದ್ದಪ್ಪ ಅವರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಪೊಲೀಸ್ ವೃತ್ತ ನಿರೀಕ್ಷಕ ಶ್ರೀನಿವಾಸ್ ರಾವ್, ಬಿಇಓ ಹಾಲಮೂರ್ತಿ, ವಿವಿಧ ಕಾಲೇಜುಗಳ ಪ್ರಾಂಶುಪಾಲರಾದ ಜಗದೀಶ್,ಪ.ಪಂ ಸದಸ್ಯ ರಮೇಶ್ ರೆಡ್ಡಿ,ಉಪನ್ಯಾಸಕರಾದ ಎ.ಎಲ್.ತಿಪ್ಪೇಸ್ವಾಮಿ, ಮಂಜುನಾಥರೆಡ್ಡಿ,ಕರಿಬಸಪ್ಪ,ಎ.ಪಿ. ನಿಂಗಪ್ಪ,ಮುಖಂಡರಾದ ಓಮಣ್ಣ,ಪಲ್ಲಾಗಟ್ಟೆ ಶೇಖರಪ್ಪ, ಮಹಮ್ಮದ್ ಗೌಸ್, ಸೇರಿದಂತೆ ಇದ್ದರು.