ಪ್ರಜಾ ನಾಯಕ ಸುದ್ದಿ ಬೆಂಗಳೂರು :- ಕಾಂಗ್ರೆಸ್ ಪಕ್ಷದಲ್ಲಿ ನೂತನ ಮುಖ್ಯಮಂತ್ರಿ ಆಯ್ಕೆಯ ಕಸರತ್ತುಗಳು ಅಂತಿಮಘಟ್ಟ ತಲುಪಿದ್ದು ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ ಯಾಗುವು ದು ಬಹುತೇಕ ನಿಶ್ಚಿತ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಉಪ ಮುಖ್ಯಮಂತ್ರಿ ಯಾಗಲಿದ್ದಾರೆ.
ನಾಳೆ ಬೆಂಗಳೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ರವರ ಹೆಸರುಗಳನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಅಧಿಕೃತವಾಗಿ ಪ್ರಕಟಿಸುವರು. ನಂತರ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಸಿದ್ದರಾಮಯ್ಯರವರು ರಾಜ್ಯಪಾಲ ಥಾವರ್ಚಂದ್ ಗೆಲ್ಹೋಟ್ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಯ ಹಕ್ಕು ಮಂಡಿಸುವರು.
ನಾಳೆಯೇ ನೂತನ ಮುಖ್ಯಮಂತ್ರಿ ಹಾಗೂ ಉಪಮುಖ್ಯ ಮಂತ್ರಿ ಗಳ ಪ್ರಮಾಣವಚನ ನಾಳೆ ಮಧ್ಯಾಹ್ನ ನಡೆಯಲಿದೆ. ರಾಹುಲ್ ಗಾಂಧಿ ಸಭೆಯಲ್ಲಿ ತೀರ್ಮಾನ ನೂತನ ಮುಖ್ಯಮಂತ್ರಿಯ ಆಯ್ಕೆಗೆ ಸಂಬoಧಿಸಿದoತೆ ದೆಹಲಿಯಲ್ಲಿ ಕಳೆದೆರೆಡು ದಿನಗಳಿಂದ ಸರಣಿ ಸಭೆಗಳು ನಡೆದಿದ್ದವು. ಇಂದು ರಾಹುಲ್ಗಾಂಧಿ ನೇತೃತ್ವದ ಲ್ಲಿ ನಡೆದ ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ಹುದ್ದೆಗೆ ಸಿದ್ದ ರಾಮಯ್ಯರವರ ಹೆಸರನ್ನು ಅಂತಿಮಗೊಳಿಸಲಾಯಿತು. ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್, ರಣದೀಪ್ಸಿಂಗ್ ಸುರ್ಜೇವಾಲಾ ಇವರುಗಳು ಭಾಗಿಯಾಗಿದ್ದರು.
ಮುವರು ಉಪಮುಖ್ಯಮಂತ್ರಿಗಳ ಸಾಧ್ಯತೆ:- ಉಪಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್ರವರ ಜತೆಗೆ ಲಿಂಗಾಯತ, ದಲಿತ ಮತ್ತು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮೂವರು ಉಪಮುಖ್ಯ ಮಂತ್ರಿಗಳಾಗುವ ಸಾಧ್ಯತೆಗಳಿದ್ದು, ಈ ಸ್ಥಾನಕ್ಕೆ ಕ್ರಮವಾಗಿ ಎಂ.ಬಿ. ಪಾಟೀಲ್, ಡಾ. ಜಿ. ಪರಮೇಶ್ವರ್ ಮತ್ತು ಯು.ಟಿ ಖಾದರ್ ಆಯ್ಕೆಯಾಗುವ ಸಾಧ್ಯತೆಗಳಿವೆ.
ಈ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಇಬ್ಬರೂ ನಾಯಕರು ತಮಗೇ ಮುಖ್ಯಮಂತ್ರಿ ಪಟ್ಟ ನೀಡುವಂತೆ ಪಟ್ಟಿ ಹಿಡಿದರಾದರೂ ರಾಹುಲ್ಗಾಂಧಿ ಸಿದ್ದರಾಮಯ್ಯ ಪರ ಒಲವು ತೋರಿದ್ದು, ಅವರೇ ಮೊದಲು ಮುಖ್ಯಮಂತ್ರಿಯಾಗಲಿ, ನೀವು ಉಪಮುಖ್ಯಮಂತ್ರಿಯಾಗಲಿ ನಂತರ ನೋಡೋಣ ಎಂದು ಹೇಳಿ ಡಿ.ಕೆ. ಶಿವಕುಮಾರ್ ಅವರ ಮನವೊಲಿಸಿದರು ಎನ್ನಲಾಗಿದೆ.
ಒಲ್ಲದ ಮನಸ್ಸಿನಿಂದ ಡಿ.ಕೆ. ಶಿವಕುಮಾರ್ ಇದಕ್ಕೆ ಒಪ್ಪಿದರು ಎಂದು ಹೇಳಲಾಗಿದೆ. ಮುಂದಿನ ವಾರ ಸಚಿವ ಸಂಪುಟ: ನಾಳೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದು, ನಂತರ ಇಬ್ಬರೂ ನಾಯಕರು ದೆಹಲಿಗೆ ತೆರಳಿ ಹೈಕಮಾಂಡ್ ಜತೆ ಚರ್ಚೆ ನಡೆಸಿದ ನಂತರ ಸಚಿವರುಗಳ ಪಟ್ಟಿ ಅಂತಿಮವಾಗ ಲಿದ್ದು, ಮುಂದಿನವಾರ ನೂತನ ಸಚಿವರುಗಳ ಪ್ರಮಾಣವಚನ ನಡೆಯಲಿದೆ.
” ನಾಳೆ ಪ್ರಮಾಣ ವಚನ ಕಾಂಗ್ರೆಸ್ ಹೈಕಮಾಂಡ್ ಇಂದು ನೂತನ ಮುಖ್ಯಮಂತ್ರಿಯ ಹೆಸರನ್ನು ಅಂತಿಮಗೊಳಿಸಲಿದ್ದು, ನಾಳೆ ನೂತನ ಮುಖ್ಯಮಂತ್ರಿ ಪ್ರಮಾಣವಚನ ಸಮಾರಂಭ ನಡೆಯಲಿ ದೆ. ನೂತನ ಮುಖ್ಯಮಂತ್ರಿಯ ಪ್ರಮಾಣವಚನ ನಾಳೆ ಮಧ್ಯಾಹ್ನ ೩.೩೦ಕ್ಕೆ ನಡೆಯಲಿದ್ದು, ವಿಧಾನಸೌಧದ ಮುಂಭಾಗದ ಮೆಟ್ಟಿಲು ಗಳ ಮೇಲೆ ಮುಖ್ಯಮಂತ್ರಿಗಳ ಪ್ರಮಾಣವಚನ ಕಾರ್ಯಕ್ರಮ ನಡೆಯುವ ಸಾಧ್ಯತೆಗಳಿವೆ.”